Thursday, April 11, 2024

ಇರ್ವತ್ತೂರು: ಉದ್ಯೋಗ ಖಾತರಿ ಯೋಜನೆ ಮಾಹಿತಿ ಶಿಬಿರ

ಬಂಟ್ವಾಳ : ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ವತಿಯಿಂದ ಇರ್ವತ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀ ಸತ್ಯನಾರಾಯಣ ಸಭಾಂಗಣದಲ್ಲಿ ಇಂದು ಜರಗಿತು.
ಪಿಲಾತ್ತಬೆಟ್ಟು ವ್ಯ.ಸೇ. ಸಹಕಾರಿ ಸಂಘದ ಹಿರಿಯ ನಿರ್ದೇಶಕ ಬೂಬ ಸಪಲ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಲ್ಲಿ ಮುಕ್ತ ಅವಕಾಶವಿದ್ದು, ಜನ ಸಾಮಾನ್ಯರಿಗೆ ಮಾಹಿತಿ ಕೊರತೆಯ ಕಾರಣ ಇಂತಹ ಶಿಬಿರಗಳನ್ನು ನಡೆಸಲಾಗುತ್ತಿದೆ. ಗ್ರಾಮಸ್ಥರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಇರ್ವತ್ತೂರು ಪಂ.ಅ.ಅಧಿಕಾರಿ ಅವಿನಾಶ್ ಬಿ.ಆರ್. ಅವರು ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಇರ್ವತ್ತೂರು ಗ್ರಾ.ಪಂ. ನಿಕಟಪೂರ್ವ ಸದಸ್ಯರಾದ ದಯಾನಂದ ಕುಲಾಲ್, ಪ್ರಶಾಂತ್ ಕೋಟ್ಯಾನ್, ಸುಧೀಂದ್ರ ಶೆಟ್ಟಿ, ಮಾಲತಿ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ನಿರ್ದೇಶಕರಾದ ಸಂತೋಷ್ ಕುಮಾರ್ ಕುಂಟಜಾಲು, ದಿನೇಶ್ ಕುಲಾಲ್, ಶಿವಯ್ಯ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ ಅವರು ಸ್ವಾಗತಿಸಿ, ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...