Saturday, April 13, 2024

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೇಕರಿ ಭಸ್ಮ

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.


ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪದ ಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿರುವ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿರುವಂತದ್ದು.
ರಾಜೇಶ್ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು ಸುಮಾರು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚಿಗೆ ಅಷ್ಟೇ ಈ ಅಂಗಡಿಯ ನವೀಕರಣ ಕೆಲಸಗಳನ್ನು ಮಾಡಲಾಗಿದೆ.
ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ ಬಳಿಕ ಮಧ್ಯ ರಾತ್ರಿ ವೇಳೆ ಈ ಘಟನೆ ನಡೆದಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...