Tuesday, April 16, 2024

ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನದ ಉದ್ಘಾಟನೆ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಸಭಾಭವನದ ಉದ್ಘಾಟನಾ ಸಮಾರಂಭ ಸರಳ ರೀತಿಯಲ್ಲಿ ದೇವಸ್ಥಾನದ ವಠಾರದಲ್ಲಿ ಇಂದು ನಡೆಯಿತು. ಉದ್ಯಮಿ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರು ನೂತನ ಸಭಾಭವನ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಗಬೆಟ್ಟು ಕ್ಷೇತ್ರದ ಜಿ.ಪಂ.ತುಂಗಪ್ಪ ಬಂಗೇರ ಮಾತನಾಡಿ, ನಾವು ನಿಸ್ವಾರ್ಥ ಮನೋಭಾವನೆಯಿಂದ ದೇವರ ಕಾರ್ಯದಲ್ಲಿ ತೊಡಗಿದಾಗ ಪರಮಾತ್ಮನ ಶಕ್ತಿ ಪ್ರಾಪ್ತಿಯಾಗುತ್ತದೆ. ಶಾಲೆ, ದೇವಸ್ಥಾನಗಳನ್ನು ನಿರ್ಮಾಣ ಮಾಡುವ ವೇಳೆ ಹಣ ಮಾಡುವ ಆಲೋಚನೆ ಬಿಟ್ಟು ಸಮಾಜ ಸೇವೆಯ ಭಾವನೆ ಬೆಳೆಸಬೇಕಿದೆ. ಮುಂದೆ ಇಲ್ಲಿನ ಸಮುದಾಯ ಭವನಕ್ಕೆ ಸರಕಾರದಿಂದ ಅನುದಾನ ತೆಗೆಸಿಕೊಡುವುದಾಗಿ ಭರವಸೆ ನೀಡಿದರು.
ಧಾರ್ಮಿಕ ಮುಂದಾಳು ಮನ್ಮಥ್ ಜೆ.ಶೆಟ್ಟಿ ಅವರು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಮಾಜಿ ಸೈನಿಕ ಮೋನಪ್ಪ ಸಪಲ್ಯ ಕರೆಂಕಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ಗೌಡ ಕರೆಂಕಿ, ಬಂಟ್ವಾಳ ಸಿ.ಎ.ಬ್ಯಾಂಕ್ ನಿರ್ದೇಶಕರಾದ ರಾಮಚಂದ್ರ ಗೌಡ ಮಣಿ, ಕರುಣೇಂದ್ರ ಪೂಜಾರಿ ಕೊಂಬರಬೆÊಲು, ಉದ್ಯಮಿ ಜಗದೀಶ್ ಪೂಜಾರಿ, ಬಂಟ್ವಾಳ ಪುರಸಭಾ ಸದಸ್ಯೆ ಮೀನಾಕ್ಷಿ ಜಗನ್ನಿವಾಸ್, ಶ್ರೀ ದುರ್ಗಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ್ ಕುಲಾಲ್, ಮಹಿಳಾ ಸಮಿತಿ ಅಧ್ಯಕ್ಷೆ ಹರ್ಷಿತಾ ದಿನೇಶ್, ಹಿಂದೂ ಯುವ ಸೇನೆ ಮಾಜಿ ಅಧ್ಯಕ್ಷ ಪ್ರವೀಣ್ ದಡ್ಡಲಾಕಾಡು, ಶಂಕರ ಪೂಜಾರಿ ದರ್ಖಾಸು, ಪಂಜಿಕಲ್ಲು ಗ್ರಾ.ಪಂ.ಮಾಜಿ ಸದಸ್ಯ ಸುರೇಶ್ ಪೂಜಾರಿ ಜೋರಾ ಉಪಸ್ಥಿತರಿದ್ದರು.
ಗ್ರಾ.ಪಂ.ಮಾಜಿ ಸದಸ್ಯ ಪೂವಪ್ಪ ಮೆಂಡನ್ ಸ್ವಾಗತಿಸಿದರು. ಧನರಾಜ್ ಕರೆಂಕಿ ವಂದಿಸಿದರು. ಆನಂದ್ ಕಾರ್ಯಕ್ರಮ ನಿರ್ವಹಿಸಿದರು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...