Wednesday, April 10, 2024

ತಲಕಾವೇರಿಯಲ್ಲಿ ಭೂ ಕುಸಿತ : ಕಾರ್ಯಾಚರಣೆಯನ್ನು ನಾಳೆಗೆ‌ ಮುಂದೂಡಿಕೆ

ಕೊಡಗು: ಜಿಲ್ಲೆಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿರುವ ಪ್ರದೇಶಕ್ಕೆ ಇಂದು ಆರಕ್ಷಕ ಅಧೀಕ್ಷಕರೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿ ದೊರೆತ ಮಾಹಿತಿಯಂತೆ ಒಂದು ಮನೆಯಲ್ಲಿ ವಾಸವಿದ್ದ ಅಂದಾಜು 80 ವರ್ಷದ ನಾರಾಯಣ ಆಚಾರ್, ನಾರಾಣ ಆಚಾರ್ ರವರ ಪತ್ನಿ ಅಂದಾಜು 70 ವರ್ಷದ ಶಾಂತ, ನಾರಾಣ ಆಚಾರ್ ರವರ ಅಣ್ಣ ಅಂದಾಜು 86 ವರ್ಷದ ಆನಂದತೀರ್ಥ ಸ್ವಾಮಿ ಮತ್ತು ಇಬ್ಬರು ಸಹಾಯಕ ಅರ್ಚಕರಾದ ಪವನ್ ಮತ್ತು ರವಿಕಿರಣ್ ಸೇರಿ ಒಟ್ಟು 05 ಜನ ಕಾಣೆಯಾಗಿರುತ್ತಾರೆ.

 

ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಆ ಪ್ರದೇಶದಲ್ಲಿ ಅತೀಯಾದ ಮಳೆ ಮತ್ತು ಮಂಜು ಮುಸುಕಿರುವ ಕಾರಣ ಪರಿಹಾರ ಕಾರ್ಯಾಚರಣೆಯನ್ನು ನಡೆಸಲು ತೊಡಕುಂಟಾಗಿದ್ದು, ಪರಿಹಾರ ಕಾರ್ಯಾಚರಣೆಯನ್ನು ನಾಳೆಗೆ ಮುಂದುವರೆಸಲಾಗಿದೆ ಎಂಬ ಮಾಹಿತಿ ಇದೆ.

ಭಾಗಮಂಡಲದಿಂದ ತಲಕಾವೇರಿಗೆ ತೆರಳುವ ರಸ್ತೆಯಲ್ಲಿ ಹಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗಿದ್ದು, ಯಾವುದೇ ವಾಹನಗಳು ತೆರಳಲು ಸಾಧ್ಯವಾಗುತ್ತಿಲ್ಲ. ಲೋಕೋಪಯೋಗಿ ಇಲಾಖೆಯಿಂದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...