Friday, April 5, 2024

ಬ್ರಹ್ಮಗಿರಿ ಬೆಟ್ಟ ಕುಸಿತ: ಮಣ್ಣಿನಲ್ಲಿ ಹೂತು ಹೋಗಿದ್ದ ಎರಡು ಕಾರುಗಳು ಹಾಗೂ ನಾರಾಯಣ ಆಚಾರ್ಯ ಅವರ ಮೃತ ದೇಹ ಪತ್ತೆ

ಕೊಡಗು:  ಜೆಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಕಳೆದ ಐದು ದಿನಗಳ ಹಿಂದೆ ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ನಾಪತ್ತೆಯಾಗಿರುವ ತಲಕಾವೇರಿ ಪ್ರಧಾನ ಅರ್ಜಕ ನಾರಾಯಣ ಆಚಾರ್ ಹಾಗೂ ಅವರ ಕುಟುಂಬಸ್ಥರು ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿದ್ದರು. ಈಗಾಗಲೇ ನಾರಾಯಣ ಆಚಾರ್ ಅವರ ಅಣ್ಣನ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದವರ ದೇಹಕ್ಕಾಗಿ ಪತ್ತೆ ಕಾರ್ಯ ನಡೆಯುತ್ತಿರುವಾಗ ಮಣ್ಣಿನಡಿ ಹೂತು ಹೋಗಿದ್ದ ಎರಡು ಕಾರುಗಳು ಪತ್ತೆಯಾಗಿವೆ.

ಮಣ್ಣಿನಡಿಯಲ್ಲಿ ಸಿಲುಕಿರುವವರ ಶೋಧ ಕಾರ್ಯ ಚುರುಕುಗೊಂಡಿದ್ದು, ಮೂರು ಹಿಟಾಚಿ, ಎನ್‌ಡಿಆರ್​ಎಫ್, ಎಸ್​ಡಿಆರ್​ಎಫ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆ ವೇಳೆ ಜಖಂ ಗೊಂಡ ಎರಡು ಕಾರುಗಳು ಪತ್ತೆಯಾಗಿದ್ದು, ಒಂದು ಡಸ್ಟರ್ ಕಾರು ಮತ್ತೊಂದು ಅಂಬಾಸಡರ್ ಕಾರು ಎಂದು ತಿಳಿದು ಬಂದಿದ್ದು, ಜೆಸಿಬಿ ಯಂತ್ರದ ಮುಖಾಂತರ ತೆಗೆಯಲಾಯಿತು.

ಇನ್ನು ಕಾರ್ಯಾಚರಣೆಯ ವೇಳೆ ವಿದೇಶದಲ್ಲಿ ನೆಲೆಸಿದ್ದ ನಾರಾಯಣಾಚಾರ್ ಅವರ ಪುತ್ರಿಯರು ಸೋಮವಾರ ಸ್ಥಳಕ್ಕೆ ಆಗಮಿಸಿದ್ದಾರೆ. ಅವರ ಮನೆಯ ಕೆಲವು ಪಾತ್ರೆಗಳು, ಪೂಜಾ ಸಾಮಾಗ್ರಿಗಳು ಮತ್ತು ಬಟ್ಟೆಗಳು ಕಾರ್ಯಾಚರಣೆಯ ವೇಳೆ ಸಿಕ್ಕಿವೆ ಎಂದು ತಿಳಿದು ಬಂದಿದೆ.

ಬ್ರಹ್ಮಗಿರಿ ಬೆಟ್ಟದಿಂದ 2 ಕಿ. ಮಿ. ದೂರದಲ್ಲಿ ತಲಕಾವೇರಿ ಯ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಆಚಾರ್ಯ ಅವರ ಮೃತ ದೇಹ ಪತ್ತೆಯಾಗಿದೆ. ಈವರೆಗೆ ಒಟ್ಟು ಇಬ್ಬರ ಮೃತ ದೇಹ ಪತ್ತೆಯಾದಂತಿದೆ. ಇನ್ನೂ ಮೂವರ ಪತ್ತೆ ಕಾರ್ಯ ಮುಂದುವರೆಸಲಾಗಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...