Wednesday, April 10, 2024

ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ

ಬಂಟ್ವಾಳ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಜತೆ ಈ ದಿನ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದರು.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪುಷ್ಪಲತಾರವರು ಆಸ್ಪತ್ರೆಯ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಪ್ರಸ್ತುತ 10 ಕೊರೊನಾ ರೋಗಿಗಳು ಚಿಕಿತ್ಸೆ ಪಡೆಯತ್ತಿದ್ದು, ಈವರೆಗೆ 70 ಕೊರೊನಾ ಪೀಡಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ತೆರಳಿರುವುದಾಗಿ ತಿಳಿಸಿದರು. ಆಸ್ಪತ್ರೆಯ ಕೆಲವೊಂದು ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಬಂಟ್ವಾಳ ಸರಕಾರಿ ಆಸ್ಪತ್ರೆ ಯಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಅತೀ ಹೆಚ್ಚಿನ ಬೇಡಿಕೆ ಇದ್ದು,  2 ಯಂತ್ರಗಳು ದಿನವೊಂದಕ್ಕೆ 10 ರೋಗಿ ಗಳಿಗೆ ಮಾತ್ರ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ. ತಾಲೂಕಿನ ಯಾವುದೇ ಆಸ್ಪತ್ರೆಯಲ್ಲಿ ಈ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ದುಬಾರಿ ಖರ್ಚು ಮಾಡಿ ಮಂಗಳೂರಿಗೆ ತೆರಳಬೇಕಾಗುವುದು.ಅಲ್ಲಿಯೂ ರೋಗಿಗಳ ಸಂಖ್ಯೆ ಹೆಚ್ಚಿದ್ದು ಬಂಟ್ವಾಳ ಆಸ್ಪತ್ರೆ ಗೆ 2 ಡಯಾಲಿಸಿಸ್ ಯಂತ್ರ ನೀಡುವ ಬಗ್ಗೆ ಮಾನ್ಯ ಸಚಿವರಲ್ಲಿ ತಿಳಿಸಿದಾಗ ಮುಜರಾಯಿ ಇಲಾಖೆಯ ಮೂಲಕ ತಾಲೂಕಿನ ‘ಎ’ ದರ್ಜೆ ದೇವಸ್ಥಾನದಿಂದ ಒಂದು ವಾರದ ಒಳಗಾಗಿ ಇದನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ ಭಟ್ ಉಪಸ್ಥಿತರಿದ್ದರು.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...