Tuesday, April 16, 2024

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭಾಗಮಂಡಲ ಭೇಟಿ ಕಾರ್ಯಕ್ರಮಕ್ಕೆ ಅಡ್ಡಿ

ಮಡಿಕೇರಿ : ಕಡಮೆಯಾಗದ ವರುಣನ ಆರ್ಭಟ. ಕೊಟ್ಟೂರು ಸಮೀಪ ಸೇತುವೆ ಮೇಲೆಯೇ ತುಂಬಿ ಹರಿಯುತ್ತಿರುವ ನದಿನೀರು. ಜೀಪ್ ನಲ್ಲಿ ಅತ್ತಿಂದಿತ್ತ ಸಾಗಬೇಕಾದ ಪರಿಸ್ಥಿತಿ. ಸಚಿವರು ಜೀಪ್ ಮೂಲಕ ಭಾಗಮಂಡಲ ತಲುಪಬೇಕಾದ ಪರಿಸ್ಥಿತಿ ಇದೆ. ಭಾಗಮಂಡಲ – ತಲಕಾವೇರಿ ಮಾರ್ಗದಲ್ಲಿ ತೆರವಾಗದ ಭೂಕುಸಿತ. ಹೀಗಾಗಿ ಭಾಗಮಂಡಲದಿಂದ ತಲಕಾವೇರಿಗೆ ಕಾಲ್ನಡಿಗೆಯಲ್ಲಿಯೇ ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳು ತೆರಳಬೇಕಾದ ಪರಿಸ್ಥಿತಿ.
ಭಾಗಮಂಡಲದಲ್ಲಿ ಕುಟುಂಬವೊಂದು ಅಪಾಯದಲ್ಲಿದೆ.ಅವರ ರಕ್ಷಣೆಗೆ ಮುಂದಾದ ಅಲ್ಲಿನ ಗ್ರಾಮಸ್ಥರು. ಸುರಕ್ಷಿತ ಪ್ರದೇಶಕ್ಕೆ ಕರೆ ತರುವ ಕಾರ್ಯ ಪ್ರಾರಂಭ.
ಮಡಿಕೇರಿ – ಮಂಗಳೂರು ರಸ್ತೆಯ ಜೋಡುಪಾಲದಲ್ಲಿ ಸಣ್ಣ ಪ್ರಮಾಣದ ಭೂಕುಸಿತವಾಗಿದ್ದು, ರಸ್ತೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...