Tuesday, April 9, 2024

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸಾವು

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಸುಮಾರು 6 ಗಂಟೆಯ ವೇಳೆ ಮಂಚಿ ಮಸೀದಿಯ ಬಳಿ ಅಪಘಾತ ಸಂಭವಿಸಿದೆ.
ಮೃತ ಯುವಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮವೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅತೀ ವೇಗದಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ.


ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...