Wednesday, April 10, 2024

ಶ್ರೀರಾಮನ ಮಂದಿರದ ನಿರ್ಮಾಣದ ಭೂಮಿಪೂಜೆ ನಿರ್ವಿಘ್ನವಾಗಿ ನಡೆಯಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಪೊಳಲಿ ರಾಜರಾಜೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬಂಟ್ವಾಳ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಪ್ರಭು ಶ್ರೀರಾಮಚಂದ್ರನ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರೆವೇರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲಿ ಮತ್ತು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲೆಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವತಿಯಿಂದ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿಯವರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ, ತಾ.ಪಂ ಸದಸ್ಯ ಯಶವಂತ ಪೊಳಲಿ, ಯುವ ಮೋರ್ಚಾದ ಸುದರ್ಶನ್ ಬಜ, ಪ್ರದೀಪ್ ಅಜ್ಜಿಬೆಟ್ಟು, ಅಶ್ವಥ್, ಕಾರ್ತಿಕ್ ಬಳ್ಳಾಲ್, ಕಿಶೋರ್ ಪಲ್ಲಿಪ್ಪಾಡಿ, ಲೋಕೇಶ್ ಭರಣಿ, ನಂದರಾಮ್ ರೈ, ಸುಕೇಶ್ ಚೌಟ, ವಾಮನ ಆಚಾರ್ಯ ಉಪಸ್ಥಿತರಿದ್ದರು.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...