Wednesday, April 10, 2024

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬಂಟ್ವಾಳ: ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫಿಟ್ ಇಂಡಿಯಾ ಅಭಿಯಾನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ರಾ.ಸೇ.ಯೋಜನಾ ಘಟಕದ ಯೋಜನಾಧಿಕಾರಿ, ಸಹಾಯಕ ಪ್ರಾಧ್ಯಾಪಕ ದೇವಿಪ್ರಸಾದ್ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಗ್ರಂಥಪಾಲಕ ಡಾ. ಶ್ರೀನಿವಾಸ ಹಾಗೂ ಕ್ರೀಡಾ ಸಂಚಾಲಕರು ಪ್ರತಿಜ್ಞಾ ವಿಧಿ ಬೋಧಿಸಿದರು. ಎಲ್ಲಾ ವಿದ್ಯಾರ್ಥಿಗಳು ಗೂಗಲ್ ಮೀಟ್ ನಲ್ಲಿ ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ., ವಿದ್ಯಾರ್ಥಿಗಳಿಗೆ ಫಿಟ್ ಇಂಡಿಯಾ ಮೂಮೆಂಟ್‌ನ ಆಶಯವನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರುಗಳಾದ ನಸೀಮಾ ಬೇಗಂ ಎಸ್, ಹನುಮಂತಯ್ಯ ಜಿ.ಹೆಚ್, ವಿನಯ್ ಎಂ.ಎಸ್ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....