Sunday, April 7, 2024

ಬಂಟ್ವಾಳ ವಿ.ಹಿಂ.ಪ., ಬಜರಂಗದಳ ಪಿಲಾತಬೆಟ್ಟು ಶಾಖೆ ಗುರುಪೂಜೆ, ರಕ್ಷಾಬಂಧನ, ಸಮ್ಮಾನ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಶ್ರೀ ರಾಮ ಶಾಖೆ ಮತ್ತು ಶ್ರೀ ರಾಮ ನಗರ ಶ್ರೀ ರಾಮಾಂಜನೇಯ ಭಜನ ಮಂದಿರದ ಸಹಕಾರದಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯ ಪ್ರಯುಕ್ತ ವಿಶೇಷ ಪೂಜೆ, ಗುರು ಪೂಜೆ, ರಕ್ಷಾ ಬಂಧನ ಮತ್ತು ಸಮ್ಮಾನ ಕಾರ್ಯಕ್ರಮ ಭಜನ ಮಂದಿರದಲ್ಲಿ ಜರಗಿತು.


ವಿ.ಹಿಂ.ಪ. ಜಿಲ್ಲಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಸ್ವರ್ಣೋದ್ಯಮಿ ಲೋಕೇಶ್ ಆಚಾರ್ಯ, ಉದ್ಯಮಿಗಳಾದ ಹರೀಂದ್ರ ಪೈ, ಶಂಕರ ಶೆಟ್ಟಿ , ಬಜರಂಗದಳ ಜಿಲ್ಲಾ ಸಹ ಸಂಚಾಲಕರಾದ ಭರತ್ ಕುಮ್ಡೇಲು, ಗುರುರಾಜ್ ಬಂಟ್ವಾಳ, ಬಜರಂಗದಳ ತಾಲೂಕು ಸಂಚಾಲಕ ಶಿವಪ್ರಸಾದ್ ತುಂಬೆ, ಸಹ ಸಂಚಾಲಕ ಅಶ್ವಥ್ ಪುಂಜಾಲಕಟ್ಟೆ , ಭಜನ ಮಂದಿರ ಪದಾಽಕಾರಿಗಳಾದ ಗಂಗಾಧರ ಗೌಡ, ಹೇಂತ ಕೋಟ್ಯಾನ್, ವಿ.ಹಿಂ.ಪ. ಪಿಲಾತಬೆಟ್ಟು ಶಾಖೆ ನಿಕಟಪೂರ್ವ ಅಧ್ಯಕ್ಷ ಲೋಹಿತ್, ಅಧ್ಯಕ್ಷ ಅಕ್ಷತ್ ದೈಕಿನಕಟ್ಟೆ, ಬಜರಂಗದಳ ಪಿಲಾತಬೆಟ್ಟು ಶಾಖೆ ಸಂಚಾಲಕ ಕಿರಣ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕರ ಸೇವಕರಾದ ಸರಪಾಡಿ ಅಶೋಕ ಶೆಟ್ಟಿ, ಪ್ರಭಾಕರ ಪಿಎಂ, ಆಶಾ ಕಾರ್ಯಕರ್ತೆಯರಾದ ಗುಣವತಿ ನಾಕುನಾಡು, ಪ್ರಮೀಳಾ ನಯನಾಡು, ಭವ್ಯಾ ಪೆಲತ್ತಕಟ್ಟೆ ಅವರನ್ನು ಸಮ್ಮಾನಿಸಲಾಯಿತು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...