Wednesday, April 17, 2024

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ: ನರಿಕೊಂಬು ಏರಮಲೆ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಗೋಳ್ತಮಜಲು ಮಹಾ ಶಕ್ತಿ ಕೇಂದ್ರ ಮತ್ತು ಯುವ ಮೋರ್ಚಾ ವತಿಯಿಂದ ಅಯೋಧ್ಯೆ ಶ್ರೀ ರಾಮ ಮಂದಿರದ ಭೂಮಿ ಪೂಜೆ ಪ್ರಯುಕ್ತ ನರಿಕೊಂಬು ಏರಮಲೆ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ದೇವಸ್ಥಾನದ ಅಧ್ಯಕ್ಷರು ಹಾಗೂ ಪ್ರಧಾನ ಅರ್ಚಕ ಕೇಶವ ಶಾಂತಿ ದೇವರಲ್ಲಿ ಪ್ರಾರ್ಥಿಸಿ, ನಂತರ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ರಕರ್ತ ರಾಜ್ ಬಂಟ್ವಾಳ್, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ನರಿಕೊಂಬು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷರು ಹಾಗೂ ಗೋಳ್ತಮಜಲು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ಜಿಲ್ಲಾ ರೈತ ಮೋರ್ಚಾ ಸದಸ್ಯ ಪ್ರೇಮನಾಥ ಶೆಟ್ಟಿ, ಹಿಂದುಳಿದ ವರ್ಗದ ಅಧ್ಯಕ್ಷ ಆನಂದ ಎ. ಶಂಭೂರು, ಯುವ ಮೋರ್ಚಾ ಉಪಾಧ್ಯಕ್ಷ ಸುರೇಶ್ ಕೋಟ್ಯಾನ್, ಯುವ ಮೋರ್ಚಾ ಸದಸ್ಯ ರಾಜೇಶ್ ಬೋಳಂತೂರು, ನಿಕಟಪೂರ್ವ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ ಅಂತರ, ವಸಂತ ಭೀಮಗದ್ದೆ, ಬೂತ್ ಸಮಿತಿಯ ಅಧ್ಯಕ್ಷ ನಾರಾಯಣ ದರ್ಖಾಸ್ ಹಾಗೂ ಪ್ರಮುಖರಾದ ಜಿನರಾಜ್ ಕೋಟ್ಯಾನ್, ಮನೋಜ್ ಕೇದಿಗೆ, ಪುರುಷೋತ್ತಮ್ ಬಂಗೇರ ನಾಟಿ, ನಾರಾಯಣ ಕೇದಿಗೆ, ಸದಾಶಿವ ಬಂಗುಳೆ, ಪ್ರಮೋದ್ ಕೇದಿಗೆ, ವಾಮನ ಕುಲಾಲ್ ನಾಟಿ, ಲೋಹಿತ್ ಬೋಳಂತೂರು, ಸತೀಶ್ ನಾಯ್ಕ್, ಚೇತನ್ ಸಪಲ್ಯ, ವಿಠಲ ಕೋಟ್ಯಾನ್ ನಾಟಿ, ಪ್ರಕಾಶ್ ನಾಟಿ, ರಾಧಾಕೃಷ್ಣ ಕೇದಿಗೆ, ಗಿರಿಧರ್ ಕುಲಾಲ್ ಕೇದಿಗೆ, ಪ್ರವೀಣ್ ಕುಲಾಲ್ ತಾರಿಪಡ್ಪು, ರಂಜಿತ್ ಮಾಣಿಮಜಲು ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...