Monday, April 15, 2024

ಪುಣಚ: ಮನೆಮದ್ದು ಮಾಹಿತಿ ಕಾರ್ಯಕ್ರಮ

ವಿಟ್ಲ: ಪುಣಚ ಗ್ರಾಮ ವಿಕಾಸ ಸಮಿತಿ, ಕೊರೊನಾ ಜಾಗೃತಿ ಸಮಿತಿ ವತಿಯಿಂದ ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಮನೆಮದ್ದು ಮಾಹಿತಿ ಕಾರ್ಯಕ್ರಮ ಭಾನುವಾರ ನಡೆಯಿತು.
ಉಡುಪಿ ಕುತ್ಪಾಡಿ ಶ್ರೀ ಧರ್ಮಸ್ಥಳ ಆಯುರ್ವೇದ ಮೆಡಿಕಲ್ ಸೆಂಟರಿನ ಆತ್ರೇಯ ನಾರಾಯಣ ಜೆಡ್ಡು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕೊರೊನದ ಬಗ್ಗೆ ಜನರು ಅತೀವ ಭಯಪಡುವ ಅವಶ್ಯಕತೆಯಿಲ್ಲ. ಸ್ವಯಂ ಮುಂಜಾಗ್ರತಾ ಕ್ರಮಗಳಿಂದ, ನಮಗೆ ನಾವೇ ರಕ್ಷಾ ಕವಚಗಳನ್ನು ಅಳವಡಿಸಿಕೊಳ್ಳಬಹುದು. ದೈಹಿಕ ಕ್ಷಮತೆ ವೃದ್ಧಿಪಡಿಸಿಕೊಳ್ಳುವುದರೊಂದಿಗೆ ಮಾನಸಿಕ ದೃಢತೆಯನ್ನು ಹೆಚ್ಚಿಸಿಕೊಳ್ಳಬೇಕೆಂದು ತಿಳಿಸಿ ಮನೆಮದ್ದಿನ ಮಾಹಿತಿ ನೀಡಿದರು.
ಬೆಂಗಳೂರು ಪರಿಪೂರ್ಣ ಸನಾತನ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಅಹಲ್ಯಾ ಸರಸ್ವತಿ ಮಾಹಿತಿ ನೀಡಿ ನಾವು ಪರಿಪೂರ್ಣ ಆರೋಗ್ಯವಂತರಾಗಲು ಕ್ರಮಬದ್ಧ ದಿನಚರಿಯನ್ನು ಚಾಚೂತಪ್ಪದೇ ಅನುಸರಿಸಿಕೊಳ್ಳಬೇಕು. ನಮ್ಮ ಆರೋಗ್ಯದೊಂದಿಗೆ ಇತರರ ಆರೋಗ್ಯದ ಕಾಳಜಿಯೂ ನಮ್ಮಲ್ಲಿರಬೇಕು ಎಂದು ತಿಳಿಸಿದರು.
ಸಮಾರಂಭವನ್ನು ಗ್ರಾಮ ವಿಕಾಸ ಸಮಿತಿ ವಿಭಾಗ ಪ್ರಮುಖ್ ಪ್ರವೀಣ್ ಸರಳಾಯ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮನೆಮದ್ದು ಸಂವಾದ ನಡೆಯಿತು.
ಸಮಿತಿ ಸಂಚಾಲಕ ಜಗದೀಶ ಮಾರಮಜಲು ಸ್ವಾಗತಿ, ಜಯರಾಮ ಕಾನ ವಂದಿಸಿದರು.

 

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...