Sunday, April 7, 2024

ಹಡೀಲು ಗದ್ದೆಯಲ್ಲಿ ಭತ್ತದ ಕೃಷಿ

ಬಂಟ್ವಾಳ : ರಾಯಿ ಗ್ರಾಮ ಗೋಪಿನಾಥ ರೈ ಅವರ ೫ ಎಕ್ರೆ ಹಡೀಲು ಗದ್ದೆಯಲ್ಲಿ ಭತ್ತದ ಕೃಷಿ ಪೋಷಕಾಂಶ, ರಸ ಗೊಬ್ಬರ ನಿರ್ವಹಣೆ ನಡೆಯಿತು.
ಹಡೀಲು ಗದ್ದೆ ನಿರ್ವಾಹಕ ಸುಧೀರ್ ಕುಮಾರ್ ಶೆಟ್ಟಿ ರಾಯಿ ಮಾತನಾಡಿ ಭತ್ತದ ಕೃಷಿ ಲಾಭದಾಯಕ ಎಂದು ತೋರಿಸುವ ಉದ್ದೇಶದಿಂದ ಈ ಹಡೀಲು ಗದ್ದೆಯಲ್ಲಿ ಕೃಷಿ ಮಾಡಲಾಗಿದೆ. ಜು. 17ರಂದು ಯಂತ್ರದ ಮೂಲಕ ಉಳುಮೆ ಮಾಡಿ ಬಿತ್ತನೆ ಮಾಡಲಾಗಿದೆ. 27 ದಿನಗಳ ಬಳಿಕ ಗದ್ದೆಗೆ ಗೊಬ್ಬರ ನಿರ್ವಹಣೆ ಮಾಡಲಾಗುತ್ತಿದೆ. ಇದಕ್ಕೆ ಕೇವಲ ದ್ರವ ರೂಪದ ಪೋಷಕಾಂಶವನ್ನಷ್ಟೇ ನೀಡಿದ್ದು ಕೃಷಿಯು ರೋಗ ರಹಿತವಾಗಿ ಪುಷ್ಠಿದಾಯಕವಾಗಿ ಬೆಳೆದಿದೆ. ಭವಿಷ್ಯದಲ್ಲಿ ಯುವಕರಿಗೆ ಹಡೀಲು ಗದ್ದೆಯನ್ನು ಕೃಷಿ ಮಾಡುವ ಪ್ರೇರಣೆಯಾಗಬೇಕು ಅದಕ್ಕಾಗಿ ಮಾದರಿ ರೂಪದಲ್ಲಿ ಕೃಷಿ ಮಾಡಿದ್ದಾಗಿ ತಿಳಿಸಿದರು.
ಭತ್ತದ ಕೃಷಿಯನ್ನು ಶೇ. 40ರಷ್ಟು ಲಾಭದಾಯಕವಾಗಿ ಮಾಡಬಹುದು. ಯುವ ಜನತೆ ಔದ್ಯೋಗಿಕ ಕೃಷಿಯ ಲಾ‘ವನ್ನು ಪಡೆದುಕೊಳ್ಳಬೇಕು ಎಂದರು.
ಪ್ರಗತಿಪರ ಕೃಷಿಕ ಕಿಶೋರ್ ಭಂಡಾರಿ, ತೆಂಗು ಸೌಹಾಧ ಸಹಕಾರಿ ಅಧ್ಯಕ್ಷ ರಾಜಾ ಬಂಟ್ವಾಳ್, ಕಾ.ನಿ.ಅಧಿಕಾರಿ ಹರ್ಷಿತ್, ಪ್ರಮುಖರಾದ ಪ್ರಕಾಶ್ ಬಿ. ಶೆಟ್ಟಿ ಶ್ರೀಶೈಲ, ಸತೀಶ್ ಪೂಜಾರಿ ಕಾರಂಬಡೆ, ರವಿರಾಜ್ ಜೈನ್ ಮತ್ತು ಸ್ಥಳೀಯ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...