


ಬಂಟ್ವಾಳ: ಮುಂಬರುವ ಗ್ರಾಪಂ. ಚುನಾವಣೆಯ ದೃಷ್ಟಿಯಿಂದ ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದ್ದಾರೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರದ ಜನ ವಿರೋಧಿ ನೀತಿ ಮತ್ತು ವೈಫಲ್ಯವನ್ನು ಮನೆ,ಮನೆ ತೆರಳಿ ತಿಳಿಸುವ ಮೂಲಕ ಬಿಜೆಪಿಯನ್ನು ಕಿತ್ತೊಗೆಯಲು ಕಾರ್ಯಕರ್ತರು ಮುಂದಾಗಬೇಕು ಎಂದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸಭಾಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಪದ್ಮಶೇಖರ ಜೈನ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್, ಜಗದೀಶ್ ಕೊಯಿಲ, ಮೋಹನ್ ಗೌಡ ಮೊದಲಾದವರಿದ್ದರು.


