Wednesday, April 10, 2024

ಎಸ್.ಎಸ್.ಎಲ್.ಸಿ. ಫಲಿತಾಂಶ : ಮರು ಮೌಲ್ಯಮಾಪನಕ್ಕೆ ಆ.24 ಕೊನೆಯ ದಿನ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಈ ಬಾರಿ ಶೇ.71.80 ರಷ್ಟು ಫಲಿತಾಂಶ ಬಂದಿದೆ.
ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶ ಕಲ್ಪಿಸಿದ್ದು, ಇಚ್ಚಿಸುವ ವಿದ್ಯಾರ್ಥಿಗಳು ಆಗಸ್ಟ್ 14 ರಿಂದ ಆಗಸ್ಟ್ 24 ರ ಒಳಗೆ ಅರ್ಜಿ ಸಲ್ಲಿಸಬಹುದು.
ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿ ನಾಳೆಯಿಂದಲೇ ಪಡೆಯಬಹುದು. ಪೂರಕ ಪರೀಕ್ಷೆಯ ದಿನಾಂಕವನ್ನು ಇನ್ನೆರಡು ದಿನಗಳ ಒಳಗಾಗಿ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಲಿದೆ ಎಂದು ವರದಿಯಾಗಿದೆ. ಮರುಎಣಿಕೆ ಒಂದು ವಿಷಯಕ್ಕೆ ರೂ.150 ಮತ್ತು ಛಾಯಾಪ್ರತಿ ಒಂದು ವಿಷಯಕ್ಕೆ ರೂ.300 ಹಾಗೂ ಮರುಮೌಲ್ಯಮಾಪನ ಒಂದು ವಿಷಯಕ್ಕೆ ರೂ.700 ಪಾವತಿಸಬೇಕಾಗಿದೆ.
ಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಛಾಯಾಪ್ರತಿ ಸ್ವೀಕರಿಸಿದ 7 ದಿನದೊಳಗಾಗಿ ಮಂಡಳಿಗೆ ಸಲ್ಲಿಸಬೇಕು ಎಂದು ಪ್ರೌಢ ಶಿಕ್ಷಣ ಮಂಡಳಿ ಸ್ಪಷ್ಟಪಡಿಸಿದೆ.
ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಶಾಲೆಗಳಿಗೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಕಳುಹಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...