Saturday, April 6, 2024

ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯುವ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಬಂದಿಲ್ಲ: ಸುರೇಶ್‌ ಕುಮಾರ್‌ ಹೇಳಿಕೆ

ಬೆಂಗಳೂರು : ಶಾಲಾ-ಕಾಲೇಜು ತೆರೆಯುವ ಬಗ್ಗೆ ಕೇಂದ್ರ ಸರ್ಕಾರ ಮಾರ್ಗ ಸೂಚಿ ಹೊರಡಿಸಿದ ಬಳಿಕ ಈ ವಿಚಾರವಾಗಿ ಚಿಂತನೆ ನಡೆಸಲಾಗುತ್ತದೆ. ಕೇಂದ್ರವು ಶಾಲಾ -ಕಾಲೇಜು ಆರಂಭದ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ವಷ್ಟಪಡಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಶಾಲಾ-ಕಾಲೇಜು ತೆರೆಯುವ ಬಗ್ಗೆ ಇಲ್ಲಿಯವರೆಗೆ ಮಾರ್ಗಸೂಚಿ ಹೊರಡಿಸಿಲ್ಲ. ಅಲ್ಲದೇ ಮಾರ್ಗಸೂಚಿ ಬಂದರೆ ಮಾತ್ರ ನಾವು ಈ ಬಗ್ಗೆ ಚಿಂತನೆ ನಡೆಸಲಿದ್ದೇವೆ ಎಂದಿದ್ದಾರೆ.
ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌‌ನಲ್ಲಿ ಶಾಲೆ ತೆರೆಯುವ ವಿಚಾರವಾಗಿ ಇಲಾಖೆ ಇನ್ನೂ ತೀರ್ಮಾನ ಮಾಡಿಲ್ಲ. ಯಾವುದಕ್ಕೂ ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದರೆ ಮಾತ್ರವೇ ಮುಂದಿನ ಚಿಂತನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...