Thursday, April 11, 2024

ಕಾಲಿನ ಬೆರಳ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಬಂಟ್ವಾಳದ ಕೌಶಿಕ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ಬಂಟ್ವಾಳ: ಕಾಲಿನ ಬೆರಳು ಮೂಲಕ ಪರೀಕ್ಷೆ ಬರೆದು ರಾಜ್ಯ ಶಿಕ್ಷಣ ಸಚಿವರ ಗಮನ ಸೆಳೆದಿದ್ದ ಬಂಟ್ವಾಳ ತಾಲೂಕಿನ ಕೌಶಿಕ್ ಪ್ರಥಮ ಶ್ರೇಣಿಯ ಲ್ಲಿ ಉತ್ತೀರ್ಣರಾಗಿದ್ದು ಶಾಲೆಗೆ, ಬಂಟ್ವಾಳ ತಾಲ್ಲೂಕಿಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತಂದಿದ್ದಾನೆ. ಎಸ್.ಎಸ್.ಎಲ್. ಸಿ.ಪರೀಕ್ಷೆಯಲ್ಲಿ 424 ಅಂಕ ಪಡೆಯುವ ಮೂಲಕ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾನೆ.

ಬಂಟ್ವಾಳ ತಾಲೂಕಿನ ಕಂಚಿಕಾರ ಪೇಟೆ ನಿವಾಸಿ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ಆಚಾರ್ಯ ಅವರ ಎರಡನೇ ಮಗ ಕೌಶಿಕ್. ಈತ ಹುಟ್ಟಿನಿಂದಲೇ ಎರಡು ಕೈಗಳಿಲ್ಲದೆ ಬದುಕಿಗೆ ಅಡಿಯಿಟ್ಟವನು. ಆದರೂ ಯಾವುದೇ ಅಂಜಿಕೆಯಿಲ್ಲದೆ ಯಾರಿಗೂ ಕಡಿಮೆಯಿಲ್ಲದ ರೀತಿಯಲ್ಲಿ ಈತ ಪ್ರತಿಭಾನ್ವಿತ ಬಾಲಕ. ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾದ್ಯಮ ಶಾಲೆಯ ವಿದ್ಯಾರ್ಥಿ. ಈ ಬಾರಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ. ಶಾಲೆಯಲ್ಲಿ ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಕೌಶಿಕ್ ಮುಂದಿದ್ದ. ಕಾಲಿನ ಮೂಲಕ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯ ಲ್ಲಿ ಉತ್ತೀರ್ಣನಾದ ಕೌಶಿಕ್ ಇತರರಿಗೆ ಮಾದರಿಯಾಗಿದ್ದಾನೆ.

ಪಾಠದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ಬಾಲಕ ಎತ್ತಿದ ಕೈ. ಈತ ಒಂದನೇ ತರಗತಿಯಿಂದಲೇ ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆಯಲು ಆರಂಬಿಸಿದ ಕಾರಣ ಎರಡು ಕೈಗಳಿಲ್ಲದ ಕೌಶಿಕ್ ನಿಗೆ ಆತನ ಕಾಲುಗಳೇ ಕೈಯಾಗಿತ್ತು. ಓದಿನ ಜೊತೆ ಕೌಶಿಕ್ ಡ್ಯಾನ್ಸ್, ಡ್ರಾಯಿಂಗ್, ಈಜು, ಕ್ರಿಕೆಟ್ ಹೀಗೆ ಎಲ್ಲ ಆಟದಲ್ಲಿಯೂ ಎತ್ತಿದ ಕೈ. ಈತನಿಗೆ ಆಟೋಟಗಳಲ್ಲಿ ಅನೇಕ ಬಹುಮಾನಗಳು ದೊರೆತಿವೆ.

 

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...