Monday, April 8, 2024

ಬೈಕ್ ಸವಾರರ ಮದ್ಯೆ ಗಲಾಟೆ

ವಿಟ್ಲ: ಮುಖ್ಯ ರಸ್ತೆಗೆ ವಾಹನವನ್ನು ಏಕಾಏಕಿ  ನುಗ್ಗಿಸಿದ ವಿಚಾರದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರ ಮಧ್ಯೆ ಮಾತಿನ ಚಕಮಕಿ ನಡೆದು ಒಬ್ಬ ಸವಾರ ಇನ್ನೊಬ್ಬ ಸವಾರನಿಗೆ ಹೆಲ್ಮೆಟ್ ನಿಂದ ಹಲ್ಲೆ ನಡೆಸಿದ ಘಟನೆ ಉಕ್ಕುಡದ ದರ್ಬೆ ಎಂಬಲ್ಲಿ ನಡೆದಿದೆ.

ಕೇಪು ಗ್ರಾಮದ ಬಡಕೋಡಿ ನಿವಾಸಿ ರಮೇಶ್ ಪೂಜಾರಿ ಅವರ ಪುತ್ರ ಅಭಿ ಯಾನೆ ಅಭಿಷೇಕ್ ಹಲ್ಲೆಗೊಳಗಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಖಲೀಮ್ ಎಂಬಾತ ತಲೆಮರೆಸಿಕೊಂಡಿದ್ದಾರೆ.
ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಕಾಸರಗೋಡು -ವಿಟ್ಲ  ರಸ್ತೆಯಲ್ಲಿ ಅಭಿ ಯಾನೆ ಅಭಿಷೇಕ್ ತನ್ನ ವಾಹನದಲ್ಲಿ  ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಆರೋಪಿ ಖಲೀಮ್ ಎಂಬಾತನು ತನ್ನ ಹೋಂಡಾ ಡಿಯೋ ವಾಹನದಲ್ಲಿ   ಎಡಬದಿಯ ರಸ್ತೆ ಯಿಂದ ಒಮ್ಮೇಲೆ ಮುಖ್ಯ
ರಸ್ತೆಗೆ ಚಲಾಯಿಸಿಕೊಂಡು ಬಂದಿದ್ದಾರೆನ್ನಲಾಗಿದೆ.  ಈ ಬಗ್ಗೆ ಖಲೀಮ್ ನಲ್ಲಿ ಪ್ರಶ್ನಿಸಿದ್ದಾರೆ. ಈ ಸಂದರ್ಭ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಖಲೀಮ್ ಎಂಬಾತ ಅಭಿಷೇಕ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ,  ಹೆಲ್ಮೆಟ್ ನಿಂದ  ತಲೆಯ
ಭಾಗಕ್ಕೆ ಹಾಗೂ ಮುಖದ ಭಾಗಕ್ಕೆ ಹೊಡೆದು ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ್ದಾನೆ ಎಂದು ಗಾಯಾಳು ಅಭಿಷೇಕ್ ಆರೋಪಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...