Tuesday, October 31, 2023

ಡಿಜೆಹಳ್ಳಿ ಗಲಭೆ, ದಾಂಧಲೆ: ಜಿಲ್ಲಾ ದ.ಸೇ. ಸಮಿತಿ ಖಂಡನೆ

Must read

ವಿಟ್ಲ: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ನಡೆದ ದಾಳಿ, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ನಷ್ಟ ಮಾಡಿರುವುದು ಹಾಗೂ ಧರ್ಮದ ಬಗ್ಗೆ ನಿಂದನೆ ಮಾಡಿದ ಘಟನೆಗಳು ಖಂಡನೀಯವಾಗಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಹೇಳಿದರು.
ಅವರು ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಘಟನೆಯನ್ನು ದಲಿತ್ ಸೇವಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಒಂದು ಧರ್ಮದ ಬಗ್ಗೆ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ದುರುಳರಿಗೂ, ಶಾಸಕರ ಮನೆಗೆ ದಾಳಿ ನಡೆಸಿದ ಕಿಡಿಗೇಡಿಗಳಿಗೂ ಕಠಿಣ ಶಿಕ್ಷೆಯಾಗಬೇಕು ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಕೂಡಾ ಎದ್ದು ಕಾಣುತ್ತಿದ್ದು, ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡುವವರನ್ನು ಅಲ್ಲದೇ ಹಲ್ಲೆಕೋರರಿಗೆ ಬೆಂಬಲ ನೀಡುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೀನಾಕ್ಷಿ ನೆಲ್ಲಿಗುಡ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಯು ವಿಟ್ಲ, ತಾಲೂಕು ಕಾರ್ಯದರ್ಶಿ ಪ್ರಸಾದ್ ಅನಂತಾಡಿ ಉಪಸ್ಥಿತರಿದ್ದರು.

More articles

Latest article