Tuesday, April 16, 2024

ಭಾರೀ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರಗಳು : ರಾಜ್ಯ ಹೆದ್ದಾರಿ ಸಂಚಾರಕ್ಕೆ ಅಡಚಣೆ

ವಿಟ್ಲ: ತಾಲೂಕಿನ ಕೊಳ್ನಾಡು ಗ್ರಾಮದ ರಾಜ್ಯ ಹೆದ್ದಾರಿ 101 ಹಾದು ಹೋಗುವ ಕರೈ ಎಂಬಲ್ಲಿ ಇಂದು ಬೆಳಿಗ್ಗೆ ಬೀಸಿದ ಭಾರೀ ಗಾಳಿ-ಮಳೆಗೆ ಹಲವಾರು ಬೃಹತ್ ಗಾತ್ರದ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು, ರಾಜ್ಯ ಹೆದ್ದಾರಿಗೆ ಉರುಳಿದ ಪರಿಣಾಮ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕುಂಟಾಗಿದೆ.

ನಿನ್ನೆ ಸಂಜೆಯಿಂದಲೇ ಭಾರೀ ಗಾಳಿ-ಮಳೆ ಇದ್ದು, ರಸ್ತೆ ಬದಿಯಲ್ಲಿರುವ ಮರಗಳು ವಿದ್ಯುತ್ ತಂತಿಯ ಮೇಲೆ ಉರುಳಿ ಬಿದ್ದಿದೆ. ಇದರಿಂದ ಏಳು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಇದರಿಂದಾಗಿ ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲದಿಂದ ಸಾಲೆತ್ತೂರು, ಮುಡಿಪು, ದೇರಳಕಟ್ಟೆ ಕಡೆಗಳಿಗೆ ತೆರಳುವ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದಾಗಿ, ಕೂಡಲೇ ಕಾರ್ಯಪ್ರವೃತ್ತರಾದ ಊರಿನ ನಾಗರಿಕರು, ಮರ ತುಂಡರಿಸುವ ಯಂತ್ರಗಳೊಂದಿಗೆ ಹಲವಾರು ಊರಿನ ಯುವಕರ ಸತತ 1 ಗಂಟೆಗಳ ಪರಿಶ್ರಮದಿಂದ ಸ್ತೆ ತೆರವುಗೊಳಿಸಿದರು.

ಘಟನ ಸ್ಥಳದಲ್ಲಿ ಸಾಮಾಜಿಕ ಕಾರ್ಯಕರ್ತ ಎಚ್.ಎಂ. ಖಾಲೀದ್ ಕೊಳ್ನಾಡು, ಅರೀಪ್ ಕರೈ, ಅಸೀಪ್ ಕರೈ, ಕರೀಂ ಬುರಾಕ್, ಸಂಶುದ್ದೀನ್, ಮುಸ್ತಫಾ, ರಝಕ್, ಅಸೀಕ್, ಹಾರೀಶ್, ನಬಾಸ್ ಮೊದಲಾದ ಪ್ರಮುಖರು ರಸ್ತೆ ಸುಗಮ ಸಂಚಾರಕ್ಕೆ ಸಹಕರಿಸಿದ್ದರು.
ಸ್ಥಳಕ್ಕೆ ಮೆಸ್ಕಾಂ ಶಾಖಾ ಅಧಿಕಾರಿ ಪ್ರಸನ್ನ ಸಕಾಲದಲ್ಲಿ ಭೇಟಿ ನೀಡಿ ರಸ್ತೆ ತೆರವುಗೊಳಿಸಲು ಮಾರ್ಗದರ್ಶನ ನೀಡಿದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...