Sunday, April 7, 2024

ಬೈಕ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬಂಟ್ವಾಳ : ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಅಡ್ಯಾರು ಕಟ್ಟೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಅಳಪೆ ಪಡೀಲ್‌ ನಿವಾಸಿ ಮಾಲತಿ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಬಸ್ಸಿನಿಂದ ಇಳಿದ ಮಹಿಳೆ ಅಡ್ಯಾರ್ ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್‌ ಮಹಿಳೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.
ಬೈಕ್‌ ಚಾಲಕನಿಗೆ ಹಾಗೂ ಹಿಂಬದಿ ಸವಾರರಾದ ಬೈಕ್‌ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ ನಾಗೋರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...