Monday, April 15, 2024

ಸ್ಕೂಟರ್‌ಗೆ ಲಾರಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಸುರತ್ಕಲ್‌‌ : ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಎದುರಿದ್ದ ಖಾಸಗಿ ಬಸ್‌ಗೆ ಸ್ಕೂಟರ್‌‌ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ನ ಮಿಸ್ಕಿತ್ ಹಾಸ್ಪಿಟಲ್ ಬಳಿ ನಡೆದ ಬಗ್ಗೆ ವರದಿಯಾಗಿದೆ.

ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಸುಧಾಕರ್‌ (28) ಎನ್ನಲಾಗಿದೆ.
ಹಿಂಬದಿಯಿಂದ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಎದುರಿದ್ದ ಖಾಸಗಿ ಬಸ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಮಂಗಳೂರು: ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಮಂಗಳೂರು: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮೈಸೂರಿನಲ್ಲಿ ಅದ್ದೂರಿ...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...