Friday, April 5, 2024

ಎಸ್.ಎಸ್.ಎಲ್.ಸಿ.- ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಬಂಟ್ವಾಳ: ಅಮ್ಟಾಡಿ ಸೇವಾ ಸಹಕಾರಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 97 ಅಂಕ ಪಡೆದ ವಿಶಿತ್ ಪ್ರೇಮ್ ವಾಸ್, ಶೇ.96 ಅಂಕ ಪಡೆದ ಅಶ್ವಿನ್ ಲೋಬೋ ಹಾಗೂ ಪಿಯುಸಿಯಲ್ಲಿ ಶೇ.77 ಅಂಕ ಪಡೆದ ವಿಕಲಾಂಗ ಬಾಲಕಿ ಭಾಗ್ಯಶ್ರೀ ಕುರಿಯಾಲ ಅವರನ್ನು ಅಮ್ಟಾಡಿ ಸೇವ ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ಸಂಘದ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಅಲ್ವಿನ್ ವಿನಯ ಲೋಬೋ, ನಿರ್ದೇಶಕರುಗಳಾದ ಪದ್ಮನಾಭ ರಾವ್, ಬಿ.ಸುರೇಶ್ ಭಂಡಾರಿ, ಥೋಮಸ್ ಲ್ಯಾನ್ಸಿ ಸಲ್ದಾನ, ಪೂರ್ಣಿಮಾ ಬೆದ್ರಗುಡ್ಡೆ, ಅನಿಲ್ ಪಿಂಟೋ, ರಮೇಶ್, ಪ್ಲೋಸಿ ಡಿ. ಸೋಜ, ಪೂರ್ಣಿಮಾ ಕೆಂಪುಗುಡ್ಡೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಯ್ ಕುಮಾರ್ ಅಜಿಲ, ಸಿಬ್ಬಂದಿಗಳಾದ ರೇಣುಕಾ ರೈ, ಐತ್ತಪ್ಪ ಸಪಲ್ಯ, ದಿನೇಶ್ ಅಮೀನ್, ನಾಗೇಶ್ ಜೋಗಿ ಮತ್ತಿತರರು ಉಪಸ್ಥಿತರಿದ್ದರು.

 

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...