Friday, April 5, 2024

ಆಸಿಡ್ ಎರಚಿ ಪರಾರಿಯಾಗಿದ್ದ ಪ್ರಕರಣ: ಆರೋಪಿ ಅರೆಸ್ಟ್‌

ಉಪ್ಪಿನಂಗಡಿ : ಆಸಿಡ್ ದಾಳಿ ನಡೆಸಿ ಪರಾರಿಯಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕು ಕೊಣಾಲು ಗ್ರಾಮದ ಮಣ್ಣಮಜಲು ನಿವಾಸಿ ಬಿಜು ಥೋಮಸ್‌‌ ಬಂಧಿತ ಆರೋಪಿ.
ಸೆ.24ರ ಗುರುವಾರದಂದು ಆರೋಪಿ ಬಿಜಿ ಥೋಮಸ್‌‌‌ ತನ್ನ ಪತ್ನಿ ಶೈನಿ ಹಾಗೂ ಅವರ ಚಿಕ್ಕಮ್ಮ ಝಾನ್ಸಿ ಎಂಬವರ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ. ಈ ಬಗ್ಗೆ ಶೈನಿ ಉಪ್ಪಿನಂಗಡಿ ಪೊಲೀಸ್‌‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪರಾರಿಯಾಗುವ ಉದ್ದೇಶದಿಂದ ಉಪ್ಪಿನಂಗಡಿ ಬಸ್‌‌ ನಿಲ್ದಾಣದ ಬಳಿಯಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಪುತ್ತೂರು ವೃತ್ತಕಛೇರಿಯ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿಯು ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ದ್ವೇಷದಿಂದ ಕೊಲ್ಲುವ ಉದ್ದೇಶ ಹೊಂದಿದ್ದು ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಇನ್ನಷ್ಟೇ ಬರಬೇಕಿದೆ.

More from the blog

ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಗಡಿಪಾರು – ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಗೆ ಪ್ರಸಾದ್ ಕುಮಾರ್ ರೈ ಖಂಡನೆ

ಬಂಟ್ವಾಳ: ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು ಅವರ ಗಡಿಪಾರು ಅದೇಶ ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದ್ದು,ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಯನ್ನು ವಿಶ್ವಹಿಂದೂ ಪರಿಷತ್ ಬಂಟ್ವಾಳ ‌ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...