Wednesday, April 10, 2024

ಆಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣೆ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ.)ಟ್ರಸ್ಟ್ ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಅಡಿಯಲ್ಲಿ ಬಿಸಿರೋಡ್ ವಲಯದ ಆಚಾರಿಪಲ್ಕೆ ಒಕ್ಕೂಟದ ವತಿಯಿಂದ ಅಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣೆ ಕಾರ್ಯಕ್ರಮ ಪಂಚಾಯತ್ ಬಳಿ ನಡೆಯಿತು.

ಈ ಕಾರ್ಯಕ್ರಮವನ್ನು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಸುದರ್ಶನ್ ಜೈನ್ ಉದ್ಘಾಟಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಕೆಲಸ ಮಾಹಿತಿ ನೀಡುತ್ತಿದ್ದು, ಸರಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ಸುಲಭ ರೂಪದಲ್ಲಿ ಮನೆ ಬಾಗಿಲಿಗೆ ತಲುಪುವ ಕೆಲಸ ಮಾಡುತ್ತಿದೆ. ಇದು ಉತ್ತಮ ಕೆಲಸ ಎಂದು ಕಾರ್ಯಕ್ರಮಕ್ಕೆ  ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ ಪಿ. ಭಾಗವಹಿಸಿ, ಗ್ರಾಮಾಭಿವೃದ್ಧಿ ಯೋಜನೆಯು ಇಡೀ ಕರ್ನಾಟಕದಲ್ಲಿ ಇದ್ದು, ಸಂಘದ ಎಲ್ಲ ಸದಸ್ಯರಿಗೂ ಯೋಜನೆಯಿಂದ ಕೃಷಿ, ಆರೋಗ್ಯದ ಮಾಹಿತಿ, ಹೀಗೆ ಎಲ್ಲ ವಿಷಯಗಳ ಮಾಹಿತಿ ನೀಡುತ್ತಿದೆ ಎಂದು ತಿಳಿಸಿದರು. ಅಯುಷ್ಮಾನ್ ಕಾರ್ಡ್ ನ ಉಪಯೋಗದ ಬಗ್ಗೆ ಕೂಡ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಬಿ.ಸಿ.ರೋಡ್ ವಲಯದ ಅಧ್ಯಕ್ಷ ಶೇಖರ ಸಾಮಾನಿ ಅಚ್ಚರಿಪಲ್ಕೆ, ಒಕ್ಕೂಟದ ಅಧ್ಯಕ್ಷ ರಾಜೇಶ್ ಗೌಡ,  ಜನ ಜಾಗ್ರತಿ ವೇದಿಕೆಯ ಸದಸ್ಯ ದೇವಪ್ಪ ಕುಲಾಲ್, ವಿಕಾಸ ಸಮನ್ವಯಾದಿಕಾರಿ ಸ್ವಪ್ನ ಮೇಡಂ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕ ಕೇಶವ ಸ್ವಾಗತಿಸಿ, ಸೇವಾ ಪ್ರತಿನಿಧಿ ರೇವತಿ ವಂದಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...