Saturday, April 6, 2024

ಅಮ್ಟೂರು ಗ್ರಾಮದಲ್ಲಿ ಆಯುಷ್ಮಾನ್ ಕಾರ್ಡ್ ಯೋಜನೆಯ ಅಭಿಯಾನ

ಬಂಟ್ವಾಳ: ತಾಲೂಕಿನ ಅಮ್ಟೂರು ಗ್ರಾಮದ ಭಾರತೀಯ ಜನತಾ ಪಾರ್ಟಿ 182 ಬೂತ್ ಸಮಿತಿಯ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಆಯುಷ್ಮಾನ್ ಕಾರ್ಡ್ ಯೋಜನೆಯ ಒಂದು ಅಭಿಯಾನವು ಅಮ್ಟೂರು ಗ್ರಾಮದ ಶ್ರೀಕೃಷ್ಣ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿತ್ಯ ನಿರಂತರ ಕಾರ್ಯ ಚಟುವಟಿಕೆಯಲ್ಲಿ ತೊಡಗಿರುವ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ಆರೋಗ್ಯವೇ ದೇಶದ ಆರೋಗ್ಯ. ನಾವು ಆರೋಗ್ಯದಿಂದ ಇದ್ದರೆ ದೇಶವೂ ಆರೋಗ್ಯವಾಗಿ ಇರುತ್ತದೆ. ಆರೋಗ್ಯದ ದೃಷ್ಟಿಯಲ್ಲಿ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕು ಹಾಗೆಯೇ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಯೋಜನೆ ಹಾಗೂ ರಾಜ್ಯ ಸರಕಾರದ ಮುಖ್ಯಮಂತ್ರಿ ಯಡಿಯೂರಪ್ಪ ಯೋಜನೆಯು ರಾಜ್ಯ ದೇಶ ಹಾಗೂ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಇದರ ರಾಜ್ಯದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಇವರು ಭಾಗವಹಿಸಿ ಸ್ವಾತಂತ್ರ್ಯ ಬಂದ ನಂತರ ಈ ದೇಶದಲ್ಲಿ ಹಲವಾರು ಪ್ರಧಾನ ಮಂತ್ರಿಗಳು ಬಂದು ಹೋದರು. ಆದರೆ ಈ ದೇಶದ ಈಗಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾಡಿದಂಥ ಅಭಿವೃದ್ಧಿ ಕಾರ್ಯಗಳು ನಮ್ಮ ದೇಶದ ರಕ್ಷಣೆಗೆ ಬೇಕಾದಂತಹ ವ್ಯವಸ್ಥೆಗಳು ಹಾಗೂ ರೈತರಿಗೆ ನಮ್ಮ ದೇಶದ ಎಲ್ಲ ಭಾರತೀಯರಿಗೆ ಮಾಡಿದಂತ ಯೋಜನೆಗಳನ್ನು ಯಾವ ಪ್ರಧಾನಿಯೂ ಮಾಡಿರಲಿಲ್ಲ ಎಂದು ಹೇಳಿದರು.

ಗೋಳ್ತಮಜಲು ಜಿ. ಪಂ. ಸದಸ್ಯೆ ಕಮಲಾಕ್ಷಿ ಪೂಜಾರಿಯವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಹಾಗೂ ರವೀಶ್ ಶೆಟ್ಟಿ, ಮಾಜಿ ತಾ. ಪಂ. ಉಪಾಧ್ಯಕ್ಷ ಆನಂದ ಏ. ಶಂಭೂರು, ಮೋನಪ್ಪ ದೇವಸ್ಯ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಮಾನಾಥ ರಾಯಿ, ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಲಕ್ಷ್ಮೀ ಪ್ರಭು, ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಬೈದರಡ್ಕ ಶ್ರೀಕೃಷ್ಣ ಭಜನಾ ಮಂದಿರ ಅಮ್ಟೂರು ಇದರ ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಎಸ್ಸಿ ಮೋರ್ಚಾ ಜಿಲ್ಲಾ ಸದಸ್ಯ ಕೃಷ್ಣಪ್ಪ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಗೋಪಾಲಕೃಷ್ಣ ಪೂವಳ, ಗೋಪಾಲ ಪೂಜಾರಿ, ಜಯಂತ ಗೌಡ, ಬೂತ್ ಸಮಿತಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿಗಾರ್, ಉಪಾಧ್ಯಕ್ಷ ನಿತಿನ್ ಕುಲಾಲ್, ಕಾರ್ಯದರ್ಶಿ ಜಿತೇಶ್ ಶೆಟ್ಟಿ ಬಾಳಿಕೆ, ಪುರುಷೋತ್ತಮ ಪೂಜಾರಿ, ಶಾಂತಿ ಪಾಲಿಕೆ ಪುರುಷೋತ್ತಮ ಟೈಲರ್ ದೇವಕ್ಕಿ, ದಿವಾಕರ ಪೂಜಾರಿ, ಇಂದಿರಾ ರೈ, ಕಾಂತಪ್ಪ ಶೆಟ್ಟಿ ಬಾಳಿಕೆ, ದೇವದಾಸ್ ಕೃಷ್ಣಾಪುರ, ವಾಸುದೇವ ಶೆಟ್ಟಿಗಾರ್, ಹರೀಶ್ ಬಟ್ಟೆ ಹಿತ್ಲು, ರತಿನ್ ಕುಮಾರ್ ಕುಶಾಲಪ್ಪ, ಶ್ರೀಮಾನ್ ಬಜರಂಗ ದಳದ ಸಂಚಾಲಕ ಕೌಶಲ್ ಶೆಟ್ಟಿ ಹಾಗೂ ಎಲ್ಲ ಪದಾಧಿಕಾರಿಗಳು ಸದಸ್ಯರು ಭಾರತೀಯ ಜನತಾ ಪಾರ್ಟಿಯ 182 ಬೂತ್ ಸಮಿತಿಯ ಪದಾಧಿಕಾರಿಗಳು ಸರ್ವ ಸದಸ್ಯರು ಭಾಗವಹಿಸಿದ್ದರು.

ದಿನೇಶ್ ಅಮ್ಟೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಶಾಲಪ್ಪ ಶ್ರೀಮನ್ ವಂದಿಸಿದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...