Sunday, April 7, 2024

ಬಂಟ್ವಾಳ ಉಪ ತಹಶೀಲ್ದಾರ್ ಶ್ರೀಧರ್ ಕೋಡಿಜಾಲ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇತ್ತೀಚೆಗೆ ನಿಧನರಾದ ಶ್ರೀಧರ್ ಇವರಿಗೆ ಬಂಟ್ವಾಳ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ಕಛೇರಿ ಸಿಬ್ಬಂದಿಗಳು ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದೊಂದಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್.ಆರ್. ಮಾತನಾಡಿ, ಎಲ್ಲರೊಂದಿಗೂ ನಗು ನಗುತ್ತಾ ಬೆರೆಯುತ್ತಿದ್ದ ಉಪತಹಶೀಲ್ದಾರರ ಅನಿರೀಕ್ಷಿತ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರಿಗೂ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸಿದರು. ಈ ವೇಳೆ ತಾಲೂಕು ಕಛೇರಿ ಸಿಬ್ಬಂದಿಗಳು ಉದ್ವೇಗ ಮತ್ತು ಭಾವುಕರಾಗಿದ್ದು ಕಂಡು ಬಂತು.
ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಸಿಬ್ಬಂದಿಗಳು, ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...