Saturday, April 20, 2024

ಕೊರೊನಾ ಸೊಂಕಿನಿಂದ ಗುಣಮುಖರಾದ ಶಾಸಕ ಜಿಲ್ಲೆಯ ಪ್ರಸಿದ್ಧ ಕ್ಷೇತ್ರವಾದ ಪೊಳಲಿ ಹಾಗೂ ಕುಕ್ಕೆ ಗೆ ಭೇಟಿ

ಬಂಟ್ವಾಳ: ಕೊರೊನಾದಿಂದ ಗುಣಮುಖರಾದ ಹಿನ್ನೆಲೆಯಲ್ಲಿ
ವಿಜಯಪುರ ನಗರ ಕ್ಷೇತ್ರ ಶಾಸಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರು ದ.ಕ.ಜಿಲ್ಲೆಯ ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.


ಕೊರೊನಾ ಮಹಾಮಾರಿ ರೋಗದಿಂದ ಶೀಘ್ರವಾಗಿ ಗುಣಮುಖರಾದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ದ.ಕ.ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಗಳಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ದೇವಸ್ಥಾನ ಕ್ಕೆ ಬೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಕಛೇರಿಗೆ ಬೇಟಿ ನೀಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರು ಬಸವನಗೌಡ ಪಾಟೀಲ ಯತ್ನಾಳ ಅವರಿಗೆ ಶಾಲು ಹೊದಿಸಿ ಸ್ವಾಗತಿಸಿದರು.
ಪತ್ರಕರ್ತ ರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಪಕ್ಷ ನೀಡಿದ ಜವಾಬ್ದಾರಿ ಯನ್ನು ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಾಮಾಣಿಕ ವಾಗಿ ನಿರ್ವಹಣೆ ಮಾಡುತ್ತೇನೆ, ಈ ಹಿಂದೆ ವಾಜಪೇಯಿ ಸರ್ಕಾರ ದಲ್ಲಿ ಪಕ್ಷ ಕೇಂದ್ರದ ಲ್ಲಿ ಸಚಿವ ಸ್ಥಾನ ನೀಡಿತ್ತು.
ಅ ಸಂದರ್ಭದಲ್ಲಿ ಪಕ್ಷಕ್ಕೆ ಮತ್ತು ಸ್ಥಾನಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡಿದ್ದೇನೆ ಎಂದು ಅವರು ತಿಳಿಸಿದರು.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...