Friday, April 5, 2024

ಬಂಟ್ವಾಳದಲ್ಲಿ ಎ.ಬಿ.ವಿ.ಪಿ. ವತಿಯಿಂದ ಪತ್ರ ಚಳುವಳಿ ಅಭಿಯಾನ

ಬಂಟ್ವಾಳ: ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಿತ್ತು ಇದರ ಅಂಗವಾಗಿ ಇಂದು ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ ಅಂಚೆ ಕಛೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿತ್ತು.ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ.ಈ ಜಾಲಕ್ಕೆ ಪ್ರಮುಖವಾಗಿ ಕಾಳೆಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಹು ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕುವ ಸವಾಲು ರಾಜ್ಯ ಸರ್ಕಾರದ ಮುಂದಿದೆ.ಅದಕ್ಕಾಗಿ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ .ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ದ ಸಮರ ಸಾರಬೇಕೆಂದು ABVP ಯು ಪತ್ರ ಚಳುವಳಿಯ ಮೂಲಕ ಆಗ್ರಹಿಸಲಾಯಿತು. ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ,ನಗರ ಕಾರ್ಯದರ್ಶಿ ಅಖಿಲಾಷ್,ಕಾಲೇಜು ಘಟಕದ ಅದ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ,ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ ,ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...