Tuesday, April 9, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾವೂರ ಗ್ರಾ.ಪಂ. ಚುನಾವಣೆಯ ಪೂರ್ವಭಾವಿ ತಯಾರಿ ಸಭೆ

ಬಂಟ್ವಾಳ:  ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾವೂರ ಗ್ರಾ.ಪಂ. ಚುನಾವಣೆಯ ಪೂರ್ವಭಾವಿ ತಯಾರಿ ಸಭೆ ಅಂಬೇಡ್ಕರ್ ಭವನದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಜರಗಿತು.

ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ರೈ ಹೇಳಿದರು.  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಒಗ್ಗಟ್ಟಿನಿಂದ ಚುನಾವಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಚುನಾವಣೆ ಸಲಹಾ ಸಮಿತಿ ಸದಸ್ಯರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಜಗದೀಶ್ ಕೊಯಿಲ, ಜನಾರ್ದನ ಚೆಂಡ್ತಿಮಾರ್, ಸಂಪತ್ ಕುಮಾರ್ ಶೆಟ್ಟಿ, ಮೊಹಮ್ಮದ್ ಸಂಗಬೆಟ್ಟು, ಪ್ರಶಾಂತ್ ಕುಲಾಲ್, ವಲಯ ಅಧ್ಯಕ್ಷ ಪುಷ್ಪರಾಜ್ ನಾವೂರ ಮುಖಂಡರಾದ ಸದಾನಂದ ನಾವೂರ, ಬೇಬಿ ಸುವರ್ಣ, ಪದ್ಮಶೇಖರ್ ಜೈನ್ ಬೀದಿ, ಏಜೇ ಮೊರಾಸ್, ಸುವರ್ಣ ಕುಮಾರ್ ಜೈನ್, ಫಾರೂಕ್ ನಾವೂರ, ಕರೀಮ್ ಪೆರ್ಲ, ಹಕೀಮ್ ಪಾಂಗೊಡಿ, ದಿನೇಶ್ ಪೂಜಾರಿ, ಗಿರಿಜಾ ಪೂಜಾರಿ, ಗುಲಾಬಿ ಚಂದಪ್ಪ ನಾಯ್ಕ, ಹಮೀದ್ ಮೈಂದಾಲ, ಶಂಕರ್ ಕಾಲೊನಿ, ವಿಜಯ ಕಾಲೊನಿ, ಸತೀಶ್ ಮಲೇಕೊಡಿ ಉಪಸ್ಥಿತರಿದ್ದರು.

 

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...