Wednesday, April 10, 2024

ವಿದ್ಯಾರ್ಥಿಗಳ ಭವಿಷ್ಯದ ಆಶಾಭಾವನೆಯೊಂದಿಗೆ ಸರಕಾರ ಶಾಲೆಗಳ ಅಭಿವೃದ್ಧಿಗೆ ಒತ್ತು: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಭವಿಷ್ಯದ ಆಶಾಭಾವನೆಯೊಂದಿಗೆ ಸರಕಾರ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಬೇಕಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡ ಇಲ್ಲಿ ರೂ .ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡದ ಶಿಲಾನ್ಯಾಸ, ಐದು ತರಗತಿ ಕೊಠಡಿ ಹಾಗೂ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಚಿಂತನೆ ಸರಕಾರಕ್ಕಿದ್ದು, ಕೋವಿಡ್ ಮಾಹಾಮಾರಿಯ ನಡುವೆಯೂ ಶಿಕ್ಷಣಕ್ಕೆ ಮಹತ್ವ ನೀಡುತ್ತಿದೆ ಎಂದು ಅವರು ಹೇಳಿದರು.

ಪೆಟ್ರೋನೆಟ್ ಎಮ್.ಎಚ್.ಬಿ. ಸಂಸ್ಥೆಯ ಇನ್ ಚಾರ್ಜ್ ರಾಜನ್ ಜಿ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷೆ ರಜನಿ ಚಿಕ್ಕಯ್ಯಮಠ, ಸಮಿತಿ ಸದಸ್ಯರಾದ ಡಾ. ಎಂ.ಶ್ಯಾಮ್ ಭಟ್, ಸುಶ್ಮಾ ಚರಣ್, ಜಿ.ಮಹಮ್ಮದ್ ಗೂಡಿನಬಳಿ, ಭರತ್, ಸುರೇಶ್ ಸಾಲಿಯಾನ್, ಹರಿಶ್ಚಂದ್ರ, ಸಚಿನ್, ಯಶೋಧ, ಸುಜಾತ, ಪದ್ಮನಾಭ ಬಳಕ, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಮೋದ್ ಅಜ್ಜಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಗುತ್ತಿಗೆದಾರ ಜಗದೀಪ್ ಡಿ. ಸುವರ್ಣ್, ಪ್ರಮುಖರಾದ ಹರಿಪ್ರಸಾದ್, ಕಾಲೇಜು ಉಪನ್ಯಾಸಕರಾದ ದಾಮೋದರ, ಅಬ್ದುಲ್ ರಜಾಕ್, ಲಕ್ಮೀ ಆಚಾರ್ಯ, ಪ್ರದೀಪ್ ಅಜ್ಜಿಬೆಟ್ಟು, ಸುದರ್ಶನ ಬಜ ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲ ಯೂಸುಫ್ ವಿಟ್ಲ ಸ್ವಾಗತಿಸಿ, ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...