Wednesday, April 17, 2024

ಬೆಳ್ತಂಗಡಿ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಕ್ಷೇಮ ಅಭಿವೃದ್ಧಿ ಸಂಘಟಣೆಯಿಂದ ಹಲವು ಸಮಸ್ಯೆಗಳ, ಬೇಡಿಕೆಗಳ ಕುರಿತು ಶಾಸಕರಲ್ಲಿ ಮನವಿ

ಬೆಳ್ತಂಗಡಿ: ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ನಿಯೋಗ ನಿನ್ನೆ ಸೆ.7 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು.
ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಇಡೀ ಶೈಕ್ಷಣಿಕ ಚಟುವಟಿಕೆಯೇ ಸ್ತಬ್ಧವಾಗಿದೆ. ರಾಜ್ಯದಲ್ಲಿ ಸುಮಾರು 3000 ಮಂದಿ ಅತಿಥಿ ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಆರು ತಿಂಗಳಿನಿಂದ (ಮಾರ್ಚ್ ನಿಂದ) ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸರಕಾರದಿಂದ ಒಂದೇ ಒಂದು ರೂಪಾಯಿ ವೇತನ ಬಂದಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಸಮಾಜದಲ್ಲಿ ದುಡಿದು ತಿನ್ನುವ ಪ್ರತಿಯೊಬ್ಬರಿಗೂ ಸರ್ಕಾರ ಕೊರೊನಾ ಆರ್ಥಿಕ ಪ್ಯಾಕೇಜ್ ನ್ನು ನೀಡಿ ಆತ್ಮಸ್ಥೈರ್ಯ ತುಂಬಿದೆ. ಇದರಿಂದ ವಂಚಿತರಾದವರು ಎಂದರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಮಾತ್ರ. ಅತಿಥಿ ಉಪನ್ಯಾಸಕರು ಇಂದಿನ ಇತ್ತೀಚಿನ ದಿನಗಳಲ್ಲಿ ಬೀದಿ– ಬೀದಿಗಳಲ್ಲಿ ಹಣ್ಣು -ಹಂಪಲು, ತರಕಾರಿ ವ್ಯಾಪಾರ ಮಾಡುತ್ತಿದ್ದು, ವಯಸ್ಸಾದ ತಂದೆ -ತಾಯಿಯ ಆನಾರೋಗ್ಯ ನೋಡಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಅದು ಮಾತ್ರವಲ್ಲದೆ ಮಾನಸಿಕ ಖಿನ್ನತೆಗೆ ಒಳಗಾಗಿ ಹಲವಾರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಂದೆ ಖಾಯಂ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಪ್ರಾದನ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಅತಿಥಿ ಉಪನ್ಯಾಸಕರನ್ನು ಹುದ್ದೆಯಿಂದ ತೆಗೆದು ಹಾಕಬಾರದು. ಕೊರೊನಾ ಅವಧಿಯಲ್ಲಿ ಖಾಯಂ ಉಪನ್ಯಾಸಕರಿಗೆ ಪ್ರತಿ ತಿಂಗಳು ಸರಕಾರದಿಂದ ವೇತನ ನೀಡಿದ್ದಂತೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೂ ಕೊರೊನಾ ರಜೆ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ವೇತನವನ್ನು ನೀಡಬೇಕು. ವೇತನ ನೀಡಲು ಸಾಧ್ಯವಿಲ್ಲದಿದ್ದರೆ ಸಮಾಜದ ಶ್ರಮಿಕರಿಗೆ ಕೊರೊನಾ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಿದ್ದಂತೆ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಕೊರೊನಾ ವಿಶೇಷ ಆರ್ಥಿಕ ಪ್ಯಾಕೇಜ್ ನ್ನು ಸರಕಾರ ನೀಡಬೇಕೆಂದು ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರಮುಖ ಪದ್ಮಪ್ರಭ ಇಂದ್ರ,  ದಿನೇಶ್ ನಾಯ್ಕ, ರಮೇಶ್, ದಿನೇಶ್ ಗೌಡ, ಸಂದೀಪ್, ಸಕಿತಾ, ತುಳಸಿ ಹಾಗೂ ಬೆಳ್ತಂಗಡಿ ತಾಲೂಕಿನ ಇನ್ನಿತರ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...