Friday, April 19, 2024

ಬೆಳ್ತಂಗಡಿ ಯುವವಾಹಿನಿ (ರಿ) ಆಶ್ರಯದಲ್ಲಿ “ಬುಲೆಚ್ಚಿಲ್” ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ಘಟಕದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಆಶ್ರಯದಲ್ಲಿ ಹಾಗೂ ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಇವರ ಸಹಕಾರದೊಂದಿಗೆ ಬುಲೆಚ್ಚಿಲ್ ಮನೆ ಅಂಗಳದಲ್ಲೊಂದು ಸಾವಯವ ತೋಟ ಎಂಬ ಕಾರ್ಯಕ್ರಮ ನಡೆಯಿತು.

ಮನೆ ಅಂಗಳದಲ್ಲೆ ಸುಲಭವಾಗಿ ಹೇಗೆ ಸಾವಯವ ತೋಟ ಮಾಡಬಹುದು,ರಾಸಾಯನಿಕ ವಿಷವನ್ನು ಬಳಸದೆ ಕೀಟನಾಶಕಗಳನ್ನು ಹೇಗೆ ತಯಾರಿಸಬಹುದು ಎಂದು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರೂಪೇಶ್ ಧರ್ಮಸ್ಥಳ ಇವರು ಸಾವಯವ ಕೃಷಿ ಸಾಧಕ ಬಾದಕವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ ಇದರ ಅಧ್ಯಕ್ಷ ಅಮ್ಮಾಜಿ ಪೂಜಾರಿ, ಬೆಳ್ತಂಗಡಿ ಘಟಕದ ಯುವವಾಹಿನಿಯ ಅಧ್ಯಕ್ಷ ಎಮ್.ಕೆ. ಪ್ರಸಾದ್, ಅಧಿಶಕ್ತಿ ಬಯೋ ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಲಿಮಿಟೆಡ್ ನ ನಿರ್ದೇಶಕರಾದ ರೂಪೇಶ್ ಧರ್ಮಸ್ಥಳ, ಸುಜಾತ ಅಣ್ಣಿ ಪೂಜಾರಿ, ಮನೋಜ್ ಕುಂಜರ್ಪ, ಸತೀಶ್ ಕೋಟ್ಯಾನ್ ಕುಕ್ಕೇಡಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ರಾಜೇಶ್ ಮದ್ದಡ್ಕ ಸ್ವಾಗತಿಸಿ, ಗುರುರಾಜ್ ಗುರಿಪಳ್ಳ ವಂದಿಸಿದರು. ಸಮೀಕ್ಷಾ ಪೂಜಾರಿ ಶಿರ್ಲಾಲು ಹಾಗು ನಿತೇಶ್ ಅದೇಲು ಕಾರ್ಯಕ್ರಮ ನಿರೂಪಿಸಿದರು.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ವೇಗಕ್ಕೆ ಬಲ ತುಂಬಿದ ಕಾರ್ಯಕರ್ತರು, ಮುಖಂಡರು

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...