Saturday, April 6, 2024

ಕಾರ್ಯನಿರ್ವಾಹಕರು, ನ್ಯಾಯಾಂಗ ಅಧಿಕಾರಿಗಳ ವೇತನವನ್ನು ಕಡಿತಗೊಳಿಸುವಂತೆ ವಿಪಕ್ಷಗಳ ಒತ್ತಾಯ

ಬೆಂಗಳೂರು: ಕೊರೊನಾ ಸಂಕಷ್ಟದ ಕಾರಣದಿಂದಾಗಿ ಸಚಿವರು, ಶಾಸಕರು ಸೇರಿದಂತೆ ವಿಧಾನಸಭೆ ಸದಸ್ಯರ ಶೇ.30ರಷ್ಟು ವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅನುಮೋದಿಸಲಾಗಿದೆ, ಹಾಗೆಯೇ 8 ವಿಧೇಯಕಗಳನ್ನು ಮಂಡಿಸಲಾಗಿದೆ.

ಜೆಡಿಎಸ್ ಹಿರಿಯ ಸದಸ್ಯ ಎ.ಟಿ.ರಾಮಸ್ವಾಮಿ ಅವರು, ನ್ಯಾಯಾಂಗ ಇಲಾಖೆಯಲ್ಲಿ ವೇತನ ಪರಿಷ್ಕರಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ”ಶಾಸಕಾಂಗದ ಒಪ್ಪಿಗೆ ಪಡೆಯದೆಯೇ ನ್ಯಾಯಾಂಗ ಅಧಿಕಾರಿಗಳು ತಮ್ಮ ವೇತನ ತಾವೇ ಹೆಚ್ಚಿಸಿಕೊಂಡು ಬಳಿಕ ಸರ್ಕಾರ ಅದಕ್ಕೆ ಅನುಮತಿ ನೀಡಿದೆ. ಆದರೆ ಅಧಿಕಾರಿಗಳಿಗೆ ಈ ಅಧಿಕಾರ ಕೊಟ್ಟವರು ಯಾರು” ಎಂದು ಪ್ರಶ್ನಿಸಿದ್ದಾರೆ. ”ಕೊರೊನಾ ಕಾರಣದಿಂದಾಗಿ ನಮ್ಮ ಭತ್ಯೆ ಕಡಿತ ಮಾಡುವುದಕ್ಕೆ ನಮಗೆ ಯಾವ ವಿರೋಧವೂ ಇಲ್ಲ. ಆದರೆ ನ್ಯಾಯಾಂಗ ಅಧಿಕಾರಿಗಳಿಗೂ ಕೂಡಾ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ವೇತನ ಕಡಿಮೆ ಮಾಡಬೇಕು. ಆದರೆ ಅವರು ಶಾಸಕಾಂಗದ ಒಪ್ಪಿಗೆಯನ್ನೂ ಪಡೆಯದೆ ತಮ್ಮಷ್ಟದಂತೆ ವೇತನವನ್ನು ಹೆಚ್ಚಿಸಿಕೊಂಡಿದ್ದಾರೆ. ಇದಕ್ಕೆ ಸರ್ಕಾರ ಬಳಿಕ ಅನುಮೋದನೆಯನ್ನೂ ನೀಡುತ್ತದೆ. ಸರ್ಕಾರವೇನು ಬಲಹೀನವಾಗಿದೆಯೇ” ಎಂದು ಆಕ್ರೋಶಗೊಂಡರು.

ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ”ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ಉತ್ತರ ನೀಡಲು ಸಾಧ್ಯವಿಲ್ಲ. ಎಲ್ಲ ಮಾಹಿತಿಯನ್ನು ಕಲೆ ಹಾಕಿ ಉತ್ತರಿಸುತ್ತೇನೆ” ಎಂದಿದ್ದಾರೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...