Saturday, April 6, 2024

“ಒಗ್ಗಟ್ಟಿನಲ್ಲಿ ಬಲವಿದೆ” ಎಂಬುದಕ್ಕೆ ಸಾಕ್ಷಿಯಾಗಿರುವ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು

ಬೆಳ್ತಂಗಡಿ: ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರ ತಂಡದ ಸಮಾಜ ಸೇವಾ ಕಾರ್ಯ

ಪರ್ಲಣಿಯ ಗಿರಿಜಾ ಎಂಬವರ ಮನೆಯಲ್ಲಿ ಕಳೆದ ಬಾರಿಯ ನೆರೆಯ ಅವಾಂತರಕ್ಕೆ ಅಕ್ಷರಶಃ ಸಂಪೂರ್ಣ ಹಾನಿಯಾಗಿದ್ದು, ಸ್ವಲ್ಪ ಮಟ್ಟಿಗೆ ಅದನ್ನು ಸರಿ ಮಾಡಿ ಕೊಟ್ಟಿದ್ದರು. ಆದರೂ ಇನ್ನೂ ಮನೆಯ ಸುತ್ತಲೂ ಹೂಳು ತುಂಬಿದ್ದು, ಬಾವಿಯು ಮುಚ್ಚಿಹೋಗಿದ್ದು, ಭಜರಂಗದಳದ ಕಾರ್ಯಕರ್ತರಿಂದ ಬಾವಿಯ ಮರು ರಚನೆ ಮಾಡಲಾಯಿತು۔

ಸ್ನಾನ ಗೃಹ ಹಾಗೂ ಶೌಚಾಲಯದ ನಿರ್ಮಾಣಕ್ಕೆ ಪಂಚಾಂಗ ನಿರ್ಮಿಸಲು ಕಲ್ಲನ್ನು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ ಇವರ ಟೆಂಪೋ ಮೂಲಕ ಹೊಳೆಯಿಂದ ಸಾಗಿಸಲಾಯಿತು.

ಸುಮಾರು 25 ಜನ ಕಾರ್ಯಕರ್ತರು ಈ ಶ್ರಮದಾನದಲ್ಲಿ ಭಾಗವಹಿಸಿದರು. ಈ ಶ್ರಮದಾನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ನಾರಾಯಣ ರಾವ್ ಮಠದ ಮಜಲು ಉಪಸ್ಥಿತರಿದ್ದರು.

 

More from the blog

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...