Wednesday, April 10, 2024

ವಿಶ್ವದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಭಾರತ..!

ನವದೆಹಲಿ: ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 2.7 ಕೋಟಿಗೆ ಏರಿಕೆಯಾಗಿದೆ, 8.83 ಲಕ್ಷ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ವಿಶ್ವದಲ್ಲಿ ಅತೀ ಹೆಚ್ಚು ಕೊರೊನಾ ವೈರಸ್ ಸೋಂಕಿತ ದೇಶಗಳ ಪಟ್ಟಿಯಲ್ಲಿ ಅಮೆರಿಕಾ ಮೊದಲ ಸ್ಥಾನದಲ್ಲಿದ್ದು, ಈವರೆಗೆ 62.75 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದೆ. 2 ನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಒಂದೇ ದಿನ 90,000 ಕ್ಕೂ ಹೆಚ್ಚು ಹೊಸ ಪ್ರಕರಣಗಳ ಹೊರತಾಗಿ, ಸಾವಿನ ಸಂಖ್ಯೆ 1,016 ರಷ್ಟು ಹೆಚ್ಚಾಗಿದೆ. ಭಾರತದ ಪ್ರಸ್ತುತ ಕೋವಿಡ್ -19 ನಿಂದ ಒಟ್ಟು 71,642 ಜನ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 42,04,613 ರಷ್ಟಿದೆ.
ಒಟ್ಟು 42 ಲಕ್ಷ ಕೊರೋನವೈರಸ್ ಪ್ರಕರಣಗಳೊಂದಿಗೆ, ಭಾರತದಲ್ಲಿ ಈಗ 8,82,542 ಸಕ್ರೀಯ ಕೋವಿಡ್ -19 ಪ್ರಕರಣಗಳಿದ್ದು, ಚೇತರಿಸಿಕೊಂಡ ಪ್ರಕರಣಗಳ ಸಂಖ್ಯೆ 32,50,429 ಕ್ಕೆ ತಲುಪಿದ್ದು, 77.31% ನಷ್ಟು ಚೇತರಿಕೆಯ ಪ್ರಮಾಣವಿದೆ ಎಂದು ವರದಿಯಾಗಿದೆ.

More from the blog

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...