Friday, April 12, 2024

ಬಂಟ್ವಾಳ ಉಪತಹಶೀಲ್ದಾರ್ ಶ್ರೀಧರ್ ಪುತ್ತೂರು ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಸಂತಾಪ

ಬಂಟ್ವಾಳ: ಬಂಟ್ವಾಳ ಕಂದಾಯ ಇಲಾಖೆಯಲ್ಲಿ ಉಪತಹಶೀಲ್ದಾರ್ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ
ಪುತ್ತೂರು ಕೋಡಿಜಾಲ ತೆಂಕಿಲ ನಿವಾಸಿ ಶ್ರೀಧರ್ (48) ಅವರು ಅಸೌಖ್ಯದಿಂದ ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಡಿದ್ದಾರೆ.
ಶ್ರೀಧರ್ ಅವರು ಅನಾರೋಗ್ಯ ದ ಹಿನ್ನೆಲೆಯಲ್ಲಿ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗದೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗಾಗಿ ದಾಖಲಾಗಿದ್ದ ರು.
ಶನಿವಾರ ರಾತ್ರಿ ಇವರ ಆರೋಗ್ಯ ದಲ್ಲಿ ಏರುಪೇರು ಉಂಟಾದ ಕಾರಣ ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಅವರು ಕೋವಿಡ್ ನ ನಿರ್ವಹಣೆ ಯ ತಂಡದಲ್ಲಿ ವಿಶೇಷವಾಗಿ ಕೆಲಸ ನಿರ್ವಹಿಸಿದ್ದರು.

ಸಂತಾಪ
ಶ್ರೀಧರ್ ಅವರ ಅಕಾಲಿಕ ಸಾವಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿ ದ್ದು ಅವರ ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.

More from the blog

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...