Tuesday, April 9, 2024

ಅಳದಂಗಡಿ ಅರಮನೆಯ ಅರಸರಾದ ದಿ.ಕೃಷ್ಣರಾಜ ಅಜಿಲರ ಪತ್ನಿ ಸರಸ್ವತಿ ಅಮ್ಮ ನಿಧನ

ಬೆಳ್ತಂಗಡಿ: ತಾಲೂಕಿನ ಅಳದಂಗಡಿ ಅರಮನೆಯ ಅರಸರಾದ ದಿ. ಕೃಷ್ಣರಾಜ ಅಜಿಲರ ಧರ್ಮಪತ್ನಿ ಸರಸ್ವತಿ ಅಮ್ಮ(೯೦) ಅವರು ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾದರು. ಈಕೆ ದಾನ-ಧರ್ಮ ಮಾಡುತ್ತಾ ಊರಿನ ಜನರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲ, ಶಿವಪ್ರಸಾದ್ ಅಜಿಲ, ಪುತ್ರಿ ಪುಷ್ಪಲತಾ ಹಾಗೂ ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

More from the blog

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...