Thursday, April 18, 2024

ಡ್ರಗ್ಸ್ ಪೆಡ್ಲರ್ ಡ್ಯಾನ್ಸರ್ ಕಿಶೋರ್ ಜೊತೆ ಡ್ರಗ್ಸ್ ಪಾರ್ಟಿ ಮಾಡಿದ್ದ ಯುವತಿಯ ಬಂಧನ

ಮಂಗಳೂರು : ಡ್ರಗ್ಸ್‌ ಸಾಗಟ ಹಾಗೂ ಸೇವನೆ ಆರೋಪದಲ್ಲಿ ಶನಿವಾರ ಬಂಧಿಸಲ್ಪಟ್ಟಿದ್ದ ಡ್ಯಾನ್ಸರ್, ನೃತ್ಯ ಸಂಯೋಜಕ ಕಿಶೋರ್ ಅಮಾನ್ ನನ್ನು ಮಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇದೀಗ ಆತನೊಂದಿಗೆ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಯುವತಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಮಣಿಪುರಿ ಮೂಲದ ಆಸ್ಕಾ ಎನ್ನಲಾಗುತ್ತಿದೆ.
ಆರೋಪಿ ಆಸ್ಕಾ ಮಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂಬ ಮಾಹಿತಿ ಇದೆ. ಪೊಲೀಸರು ಬಂಧಿಸಿದ ಯುವತಿಯನ್ನು ಡ್ರಗ್ಸ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿರುವುದು ವರದಿಯಾಗಿದೆ.

More from the blog

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...