Friday, April 5, 2024

ಕರಾವಳಿಯಲ್ಲಿ ಭಾರಿ ಮಳೆ: ಜಲಾವೃತಗೊಂಡ ರಸ್ತೆಗಳು

ಬಂಟ್ವಾಳ: ಕರಾವಳಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡಾ ಮಳೆ ಮುಂದುವರೆದಿದೆ. ಎರಡು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಮಂಗಳೂರು ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ.
ನಿರಂತರ ಮಳೆಯ ಪರಿಣಾಮ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಕುಂಟಿಕಾನ ಬಳಿ ರಸ್ತೆಯ ಪಕ್ಕ ಕುಸಿತಗೊಂಡಿದೆ. ನಿನ್ನೆ ರಾತ್ರಿಯ ನಿರಂತರ ಮಳೆಯಿಂದಾಗಿ ಕೊಟ್ಟಾರ ಚೌಕಿ, ಅಳಕೆ, ಅಶೋಕ್ ನಗರ, ಪಾಂಡೇಶ್ವರ ಭಾಗದಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ನಗರದ ಹಲವು ಹಲವಾರು ಮನೆಗಳಿಗೆ ಹಾಗೂ ಅಂಗಡಿಗಳಿಗೆ ಮಳೆ ನೀರು ನುಗ್ಗಿದೆ. ಅಲ್ಲದೇ, ವಾಹನ, ಜನರ ಸಂಚಾರಕ್ಕೂ ಅಡಚಣೆಯಾಗಿದೆ. ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಪ್ರದೇಶಗಳಲ್ಲಿ ನಿನ್ನೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಇಂದು ಕೂಡಾ ಮಳೆ ಮುಂದುವರೆದಿದೆ.


ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಅವಧಿಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಕರಾವಳಿಯಲ್ಲಿ ಸೆಪ್ಟೆಂಬರ್‌‌ 11 ಹಾಗೂ 12ರಂದು ರೆಡ್‌ ಅಲರ್ಟ್ ಘೋಷಿಸಲಾಗಿದ್ದು, ಸೆಪ್ಟೆಂಬರ್‌ 13ರವರೆಗೆ ಎಚ್ಚರಿಕೆ ನೀಡಲಾಗಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...