Thursday, April 11, 2024

ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ

ವಿಟ್ಲ: ಮನೆ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆ ಎಂಬಲ್ಲಿ ಸಂಭವಿಸಿದೆ‌.

ತರಕಾರಿ ವ್ಯಾಪಾರ ನಡೆಸುತ್ತಿರುವ ಅಬ್ದುಲ್ಲ ಎಂಬವರ ಮನೆಯ ಪಕ್ಕದ ಧರೆ ಜೋರಾದ ಮಳೆಗೆ ಕುಸಿದು ಮನೆ ಮೇಲೆ ಉರುಳಿ ಬಿದ್ದಿದೆ. ಇದರಿಂದ ಮನೆಯ ಸಂಪೂರ್ಣವಾಗಿ ನೆಲಸಮವಾಗಿದೆ. ಘಟನೆಯಲ್ಲಿ ಕುಟುಂಬದ ಆರು ಮಂದಿ ಮನೆಯ ಅವಷೇದದಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಆರು ಮಂದಿಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ಮನೆ ಯಜಮಾನ ಅಬ್ದುಲ್ಲ, ಪತ್ನಿ ಜೋಹಾರ, ಮಕ್ಕಳಾದ ಅರಫಾಝ್, ಇರ್ಪಾನ್, ತಸ್ಲೀಮಾ, ಮಿಶ್ರಿಯಾ ಗಾಯಗೊಂಡಿದ್ದು, ವಿಟ್ಲ ಹಾಗೂ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...