Tuesday, April 9, 2024

ಮೆಲ್ಕಾರ್ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ವಿದ್ಯುತ್ ಕಂಬಗಳು: ಸಂಚಾರಕ್ಕೆ ಅಡಚಣೆ, ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ಬಿ.ಸಿ.ರೋಡು-ಕೋಣಾಜೆ ರಾಜ್ಯ ಹೆದ್ದಾರಿಯ ಮೆಲ್ಕಾರ್ ನಲ್ಲಿ ಮೆಸ್ಕಾಂ ಇಲಾಖೆಗೆ ಸೇರಿದ ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿದರೆ, ನಾಲ್ಕು ವಿದ್ಯುತ್ ಕಂಬಗಳು ಬೀಳುವ ಹಂತದಲ್ಲಿ ವಾಲಿ ನಿಂತಿದ್ದು, ತಂತಿಗಳು ಕಡಿದು ಬಿದ್ದ ಘಟನೆ ಮಧ್ಯರಾತ್ರಿ ವೇಳೆ ನಡೆದಿದೆ.
ಪುರಸಭಾ ವ್ಯಾಪ್ತಿಯ ಮೆಲ್ಕಾರ್ ಕೋಣಾಜೆ ರಸ್ತೆಯಲ್ಲಿ ರಾತ್ರಿ ವೇಳೆ ನಾಲ್ಕು ವಿದ್ಯುತ್ ಕಂಬಗಳು ಉರುಳಿ ಬಿದ್ದು, ತಂತಿಗಳು ತುಂಡಾಗಿ ಹೆದ್ದಾರಿಗೆ ಬಿದ್ದ ಕಾರಣ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗಿದೆ. ಪ್ರಸ್ತುತ ವಾಹನಗಳು ಮತ್ತೊಂದು ಬದಿಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ಭಾಗದ ಒಟ್ಟು ಆರು ಟ್ರಾನ್ಸ್ ಫಾರ್ಮರ್ ಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದ್ದು, ಉಳಿದಂತೆ ಈ ಭಾಗಕ್ಕೆ ಬೇರೆ ಟ್ರಾನ್ಸ್ ಫಾರ್ಮ್ಗಳ ಸಂಪರ್ಕ ನೀಡಲಾಗಿದ್ದು, ಸಂಜೆಯ ವೇಳೆ ರಿಪೇರಿ ಮಾಡಿಕೊಡಲಾಗುವುದು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪುರಸಭಾ ಇಲಾಖೆ ಈ ಭಾಗದ ಚರಂಡಿಯನ್ನು ಅಗಲ ಮಾಡಿದ ಕಾರಣ ಒಂದು ವಿದ್ಯುತ್ ಕಂಬದ ಬುಡಕ್ಕೆ ಹಾನಿಯಾಗಿತ್ತು.
ಒಂದು ವಿದ್ಯುತ್ ಕಂಬಕ್ಕೆ ಉಂಟಾದ ಸಮಸ್ಯೆಯಿಂದ ಉಳಿದ ಐದು ಕಂಬಗಳು ಬೀಳಲು ಕಾರಣವಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಡಿಯೊಂದಕ್ಕೆ ಪಾರ್ಕಿಂಗ್
ಮೆಲ್ಕಾರ್ ನಲ್ಲಿರುವ ಅಂಗಡಿಯೊಂದಕ್ಕೆ ಪಾರ್ಕಿಂಗ್ ಮಾಡಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಚರಂಡಿಯನ್ನು ಅಗಲಿಸಲಾಗಿತ್ತು.
ಈ ಸಂದರ್ಭದಲ್ಲಿ ಒಂದು ವಿದ್ಯುತ್ ಕಂಬದ ಬುಡದ ಮಣ್ಣು ಕಿತ್ತುಹೋಗಿ ಅ ಸಂದರ್ಭದಲ್ಲಿಯೇ ಕಂಬ ವಾಲಿತ್ತು. ಈ ಒಂದು ವಿದ್ಯುತ್ ಕಂಬಕ್ಕೆ ಉಂಟಾದ ಸಮಸ್ಯೆ ಉಳಿದ ಐದು ಕಂಬಳಿಗೆ ಹಾನಿಯಾಗಿದ್ದು, ಜೊತೆಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ಸ್ಥಳೀಯರೋರ್ವರು ಆರೋಪ ವ್ಯಕ್ತಪಡಿಸಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...