Friday, April 12, 2024

ಹಿರಿಯಡ್ಕದಲ್ಲಿ ಕಿಶನ್ ಹೆಗ್ಡೆ ಕೊಲೆ ಪ್ರಕರಣ: ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕು ತಂಡ ರಚನೆ

ಉಡುಪಿ : ಹಿರಿಯಡ್ಕ ಪೇಟೆಯಲ್ಲಿ ಗುರುವಾರ ಹಾಡು ಹಗಲೇ ನಡೆದ ಕಿಶನ್ ಹೆಗ್ಡೆಯ ಕೊಲೆ ಪ್ರಕರಣ ಬೇಧಿಸಲು ಪೊಲೀಸರ ನಾಲ್ಕು ತನಿಖಾ ತಂಡ ರಚಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಬೆಂಗಳೂರು ಮತ್ತು ಮಂಗಳೂರಿಗೆ ಆ ತಂಡ ತೆರಳಿದೆ ಎಂದು ವರದಿಯಾಗಿದೆ. ಕಿಶನ್ ಜೊತೆಗಿದ್ದ ದಿವ್ಯರಾಜ್ ಶೆಟ್ಟಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು ಇರ್ವತ್ತೂರಿನ ಹಾಡಿಯ ಬಳಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ನಿನ್ನೆ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಗುರುತನ್ನು ಈಗಾಗಲೇ ದಿವ್ಯರಾಜ್ ಪೋಲಿಸರಿಗೆ ತಿಳಿಸಿದ್ದು, ಕೃತ್ಯದಲ್ಲಿ ಭಾಗಿಯಾದವರಲ್ಲಿ ಮೂವರು ಧರ್ಮಸ್ಥಳ ಕಡೆಗೆ ಪರಾರಿಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಇನ್ನೂ ಮೂವರು ಕಾರ್ಕಳ ಪರಿಸರದಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದೆ. ಕೊಲೆಗೀಡಾದ ಕಿಶನ್‌ ಹೆಗ್ಡೆ ಬುಧವಾರ ತನ್ನ ಜತೆಗಾರರೊಂದಿಗೆ ಕಾರ್ಕಳಕ್ಕೆ ಬಂದಿದ್ದ. ಕೆಲವು ಮೂಲಗಳ ಪ್ರಕಾರ ಮನೋಜ್ ಮತ್ತು ಕಿಶನ್ ಸ್ನೇಹಿತರಾಗಿದ್ದು, ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ವೈಶಮ್ಯ ಬೆಳೆದಿತ್ತು. ಅಲ್ಲದೆ ಕಿಶನ್ ಗೆ ಭೂಗತ ಪಾತಕಿಗಳೊಂದಿಗೂ ಸಂಪರ್ಕವಿತ್ತು ಎನ್ನಲಾಗುತ್ತಿದೆ. ಈ ವೈಷಮ್ಯದಿಂದಲೇ ಕಿಶನ್ ಕೊಲೆ ನಡೆದಿದೆ ಎಂದು ಸಂಶಯ ವ್ಯಕ್ತವಾಗಿದೆ. ಅದೇನೆ ಇದ್ದರು ಆರೋಪಿಗಳು ಪೋಲಿಸರ ವಶಕ್ಕೆ ಸಿಕ್ಕದ ಮೇಲೇಯೆ ನಿಜ ಸಂಗತಿ ಗೊತ್ತಾಗಬೇಕಿದೆ.

More from the blog

ಗುದನಾಳದಲ್ಲಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ 58,78,880 ರೂಪಾಯಿ ಮೌಲ್ಯದ 812 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ವಾಡಿಕೆಯ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದಿಂದ ಬೀಪ್...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಏಪ್ರಿಲ್​ 18 ರವರೆಗೆ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ...

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ನಕಲಿ ಸುದ್ದಿ ಪ್ರಕಟ : ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಪೊಲೀಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೋಮು ಭಾವನೆಯ ಹೇಳಿಕೆ ನೀಡಿದ್ದಾರೆಂಬ ನಕಲಿ ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚಾರ ಮಾಡುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಹ್ಮಣ್ಯ ಕಾಂಗ್ರೆಸ್ ವತಿಯಿಂದ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ...