Wednesday, April 17, 2024

ಐಪಿಎಲ್ 2020: ಮುಂಬೈ ವಿರುದ್ಧ ಸೂಪರ್​ ಓವರ್‍ ನಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ದುಬೈ: ಐಪಿಎಲ್ 2020ರ ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸೂಪರ್ ಓವರ್ ನಲ್ಲಿ​ ಜಯ ಗಳಿಸಿತು.
ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ನಿಗದಿತ 20 ಓವರ್​ಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆಯಲ್ಲಿ ಫಲಿತಾಂಶ ನಿರ್ಣಾಯಕ್ಕಾಗಿ ಸೂಪರ್ ಓವರ್ ನ ಮೊರೆ ಹೋಗಲಾಯಿತು. ಈ ವೇಳೆ ಮುಂಬೈ ತಂಡ 7 ರನ್ ಪೇರಿಸಿದರೆ, ಇದಕ್ಕೆ ಪ್ರತಿಯಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಜೋಡಿ 11 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟಿತು.
ಟಾಸ್​ ಸೋತ ಆರ್​ಸಿಬಿಗೆ ಮೊದಲು ಬ್ಯಾಟಿಂಗ್ ಮಾಡಲು​ ಅವಕಾಶ ಸಿಕ್ಕಿತ್ತು. ದೇವದತ್ ಪಡಿಕಲ್ (54ರನ್, 40 ಎಸೆತ, 5 ಬೌಂಡರಿ, 2 ಸಿಕ್ಸರ್), ಆರಂಭಿಕ ಆರನ್ ಫಿಂಚ್ (52 ರನ್, 35 ಎಸೆತ, 7 ಬೌಂಡರಿ, 1 ಸಿಕ್ಸರ್) ಹಾಗೂ ಎಬಿ ಡಿವಿಲಿಯರ್ಸ್ (55*ರನ್, 24 ಎಸೆತ, 4 ಬೌಂಡರಿ, 4 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಫಲವಾಗಿ 3 ವಿಕೆಟ್​ಗೆ 201 ರನ್ ಕಲೆಹಾಕಿತು. ನಂತರ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಇಶಾನ್ ಕಿಶನ್ (99ರನ್, 58 ಎಸೆತ, 2 ಬೌಂಡರಿ, 9 ಸಿಕ್ಸರ್) ಹಾಗೂ ಸ್ಪೋಟಕ ಬ್ಯಾಟ್ಸ್​ಮನ್ ಕೈರಾನ್ ಪೊಲ್ಲಾರ್ಡ್ (60*ರನ್, 24 ಎಸೆತ, 3 ಬೌಂಡರಿ, 5 ಸಿಕ್ಸರ್) ಜೋಡಿ 5 ವಿಕೆಟ್​ಗೆ 201 ರನ್​ ಗಳಿಸಿತು. ಈ ಎರಡೂ ತಂಡಗಳು 201 ರನ್ ಕಲೆ ಹಾಕಿ ಸಮಬಲದ ಪರಿಣಾಮ ಸೂಪರ್​ ಓವರ್​ ಗೆ ಮೊರೆ ಹೋಗಬೇಕಾಯಿತು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...