Tuesday, October 17, 2023

ಐಪಿಎಲ್ 2020: 44 ರನ್ ಗಳಿಂದ ಸಿ.ಎಸ್.ಕೆ. ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್

Must read

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ 2020 ನೇ ವರ್ಷದ ಐಪಿಎಲ್ ಟೂರ್ನಿಯ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇದು ಎರಡನೇ ಸೋಲಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಗೆ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಮೂಲಕ ಶ್ರೇಯಸ್ ಪಡೆ ಗೆಲುವಿನ ಓಟ ಮುಂದುವರಿಸಿದೆ.
ಪೃಥ್ವಿ ಶಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಗೆ 175 ರನ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಮಾಡಿದರು.

More articles

Latest article