Saturday, April 6, 2024

ಜಾರ್ಖಂಡ್‌ನಲ್ಲಿ 18 ಐಇಡಿಗಳನ್ನು ನಿಷ್ಕ್ರಿಯಗೊಳಿಸಿದ ಸಿಆರ್‌ಪಿಎಫ್

ಚಾಯ್‍ಬಾಸಾ (ಜಾರ್ಖಂಡ್): ನಕ್ಸಲರ ಉಪಟಳ ಹೆಚ್ಚಾಗಿರುವ ಜಾರ್ಖಂಡ್‍ನ ವೆಸ್ಟ್ ಸಿಂಗ್‍ಭೂಮ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 18 ಸುಧಾರಿತ ಸ್ಫೋಟಕಗಳನ್ನು (ಐಇಡಿಗಳು) ಭದ್ರತಾಪಡೆಗಳು ನಿಷ್ಕ್ರಿಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರೀ ವಿಧ್ವಂಸಕ ಕೃತ್ಯಗಳನ್ನು ಎಸಗಲು ಕುತಂತ್ರ ರೂಪಿಸಿದ್ದ ನಕ್ಸಲರ ಯತ್ನವು ಈ ಕಾರ್ಯಾಚರಣೆ ಮೂಲಕ ವಿಫಲಗೊಂಡಿದೆ.

ಈ ಕೃತ್ಯವನ್ನು ನಿಷೇಧಿತ ಮಾವೋವಾದಿ (ಸಿಪಿಐ) ಉಗ್ರರು ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮೀಸಲು ಪಡೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಗೋಯಿಲ್ಕೆರಾ ಪೊಲೀಸ್‌ ಠಾಣೆ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಈ ಸುಧಾರಿತ ಸ್ಪೋಟಕಗಳು ಪತ್ತೆಯಾಗಿದ್ದು, ಬಳಿಕ ಅದನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಗಳನ್ನು ಗುರಿಯಾಗಿಸಿಕೊಂಡು ಐಇಡಿಗಳನ್ನು ಹಾಕಲಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಬಾಂಬ್‌ ನಿಷ್ಕ್ರಿಯದಳದವರು ಈ ಪ್ರದೇಶವನ್ನು ತಲುಪಿ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ ಎಂದು ವರದಿಯಾಗಿದೆ.

 

 

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...