Thursday, April 18, 2024

ಇರ್ವತ್ತೂರು: ಆಭರಣ ಈಡಿನ ಸಾಲ ಆರಂಭ

ಬಂಟ್ವಾಳ : ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಇರ್ವತ್ತೂರು ಶಾಖೆಯಲ್ಲಿ ಆಭರಣ ಈಡಿನ ಸಾಲದ ಉದ್ಘಾಟನಾ ಕಾರ್ಯಕ್ರಮ ಜರಗಿತು.
ಸಂಘದ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇರ್ವತ್ತೂರು, ಮೂಡುಪಡುಕೋಡಿ ಗ್ರಾಮಗಳ ಜನತೆಯ ಅನುಕೂಲಕ್ಕಾಗಿ ಆಭರಣ ಈಡಿನ ಸಾಲ ಸೇವೆಯ ವ್ಯವಸ್ಥೆ ಪ್ರಾರಂಭಿಸಲಾಗಿದ್ದು, ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಸಂಘದ ಉಪಾಧ್ಯಕ್ಷ ಉಮೇಶ್ ಪೂಜಾರಿ, ನಿರ್ದೇಶಕರಾದ ಸುಂದರ ನಾಯ್ಕ, ನಾರಾಯಣ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ಶಿವಯ್ಯ, ಹರ್ಷಿಣಿ ಪುಷ್ಪಾನಂದ, ಇರ್ವತ್ತೂರು ಗ್ರಾ.ಪಂ. ನಿಕಟಪೂರ್ವ ಸದಸ್ಯರಾದ ಪ್ರಶಾಂತ್ ಕೋಟ್ಯಾನ್, ದಯಾನಂದ ಕುಲಾಲ್, ಸುಽಂದ್ರ ಶೆಟ್ಟಿ, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ, ಸಿಬಂದಿಗಳಾದ ರೂಪೇಶ್, ದೀಕ್ಷಿತ್ ಚೌಟ ಮತ್ತಿತರರು ಉಪಸ್ಥಿತರಿದ್ದರು.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...