Thursday, April 18, 2024

ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

ಸುಳ್ಯ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸೆ.2 ರಂದು ನಡೆಯಿತು. ಮಂಗಳೂರಿನಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದ ಯಶಸ್ವಿನ ಸವಿ ನೆನಪಿಗಾಗಿ ಸಂಘದ ಸದಸ್ಯರಿಗೆ ಕಿಟ್ ಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಗುರುತಿನ ಚೀಟಿ, ಆರೋಗ್ಯ ಕಾರ್ಡ್ ಹಾಗು ಕಿಟ್ ಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಶ್ರೀನಿವಾಸ ನಾಯಕ್ ಇಂದಾಜೆ ಸಂಘದ ಕಾರ್ಯಚಟುವಟಿಕೆಗಳ ಮತ್ತು ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿವರಿಸಿದರು.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಲೋಕೇಶ್ ಪೆರ್ಲಂಪಾಡಿ ವಂದಿಸಿದರು.

More from the blog

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...