Monday, April 8, 2024

ಅಭಿನಂದನೆ ಕಾರ್ಯಕ್ರಮ

ಕಲ್ಲಡ್ಕ: ಶಿಕ್ಷಕರು ಮಕ್ಕಳ ಜೊತೆಗೆ ಮಕ್ಕಳಾಗಿ ಬೆರೆತಾಗ ಹೆಚ್ಚು ಆತ್ಮೀಯರಾಗಿರುತ್ತಾರೆ. ವಿಧ್ಯಾರ್ಥಿಗಳೊಂದಿಗೆ ಸ್ನೇಹಿತರಾದಾಗ ಸಂಬಂಧ ಗಟ್ಟಿಯಾಗಿ ಉಳಿಯುತ್ತದೆ. ಪ್ರಶಸ್ತಿಗಳು ಪೂರಕವಾಗಿ ಅಹ೯ತೆಗೆ ಹಿಡಿದ ಕೈಗನ್ನಡಿಗಳಾಗಿರುವಾಗ ಮಾತ್ರ ಉತ್ತಮ ಫಲಿತಾಂಶ ಹೊಂದಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿದ್ದ ಗೊಳ್ತಮಜಲು ಪ್ರೌಢ ಶಾಲಾ ಶಿಕ್ಷಕ ನಾರಾಯಣ ಗೌಡ ರವರು 2020ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಜಿ ವೀರಕಂಭ ಶಾಲೆಯ ಶಿಕ್ಷಕಿ ಸಂಗೀತ ಶಮ೯ರವರನ್ನು ಅಭಿನಂದಿಸಿ ಮಾತನಾಡಿದರು.
ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಮಾತನಾಡಿ, ಶಾಲಾ ಅಭಿವೃದ್ಧಿಗಳಲ್ಲಿ ಎಲ್ಲಾ ರೀತಿಯಲ್ಲೂ ಸಹಶಿಕ್ಷಕರು ಸಹಕರಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದರು.
ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುವುದರೊಂದಿಗೆ ನಮಗೆ ಜವಾಬ್ದಾರಿಯನ್ನು ನಿವ೯ಹಿಸುವಲ್ಲಿ ಪ್ರೇರಣೆಯನ್ನೂ ಕೊಡುತ್ತದೆ. ಇದು ಕೇವಲ ಒಬ್ಬರಿಂದ ಸಾಧ್ಯವಾಗಲಾರದು, ಅದರ ಹಿಂದೆ ಹಲವರ ಶ್ರಮ ಮತ್ತು ಪ್ರೋತ್ಸಾಹ ಇದೆ ಎಂದು ಅಭಿನಂದನೆ ಸ್ವೀಕರಿಸಿ, ಸಂಗೀತ ಶಮ೯ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ವಿಟ್ಲ ಚಂದಳಿಕೆ ಶಾಲಾ ವಿಧ್ಯಾವದ೯ಕ ಸಂಘದ ಶ್ರೀನಿವಾಸ ರವರು ಉಪಸ್ಥಿತರಿದ್ದು, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅನುಷಾ ಸ್ವಾಗತಿಸಿ, ಶಿಕ್ಷಕಿ ಜಯಲಕ್ಷ್ಮಿ ವಂದಿಸಿದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...